Headlines

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ

Tabaahi Song: ಭಟ್ಟರ ಸಾಹಿತ್ಯದಲ್ಲಿ ಬಂತು ಟಾಕ್ಸಿಕ್ ‘ತಬಾಹಿ’ ಸಾಂಗ್; ಹೇಗಿದೆ ನೀವು ಕೇಳಿ


ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡುತ್ತಿದ್ದಾರೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್‌ಡೇಟ್ ನೀಡುತ್ತಲೇ ಇದೆ. ಈಗ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟು ಆರು ಹಾಡುಗಳು ಇವೆ. ಈ ಸಿನಿಮಾಗಾಗಿ ಐದು ಸಂಗೀತ ಸಂಯೋಜಕರು ಕೆಲಸ ಮಾಡಿದ್ದಾರೆ. ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟವಾಯಿತೇ?

‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಕೆಲಸ ಮುಗಿದಿದ್ದು, ರಿಲೀಸ್ ಮಾತ್ರ ಬಾಕಿ ಉಳಿದಿದೆ. ಈ ಸಿನಿಮಾಗೆ ಶೀಘ್ರವೇ ಸೆನ್ಸಾರ್ ಪ್ರಕ್ರಿಯೆ ಕೂಡ ಪೂರ್ಣಗೊಳ್ಳಲಿದೆ. ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎಂಬ ಕುತೂಹಲ ಮೂಡಿದೆ. ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.



Source link

Leave a Reply

Your email address will not be published. Required fields are marked *