Headlines

ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ

ಫ್ಯಾನ್ಸ್ ಭೇಟಿಯಾಗಲು ಸಾಧ್ಯವಾಗುತ್ತಿಲ್ಲ: ಹುಟ್ಟುಹಬ್ಬಕ್ಕೂ ಮುನ್ನ ಯಶ್ ಸಂದೇಶ


ನಟ ರಾಕಿಂಗ್ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ (ಯಶ್ ಜನ್ಮದಿನ) ಸಂಭ್ರಮ. ಆದರೆ ಈ ಬಾರಿ ಅವರು ಅಭಿಮಾನಿಗಳ ಜೊತೆ ಜನ್ಮದಿನ ಆಚರಿಸಲು ಸಾಧ್ಯವಾಗುತ್ತಿಲ್ಲ. ಒಂದು ದಿನ ಮೊದಲೇ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶ ತಿಳಿಸಿದ್ದಾರೆ. ‘ನನ್ನ ಪ್ರೀತಿಯ ಅಭಿಮಾನಿಗಳೇ, ನಿಜ ಹೇಳಬೇಕೆಂದರೆ, ಕಳೆದ ಕೆಲವು ವರ್ಷಗಳಿಂದ ನೀವು ನನ್ನನ್ನು ಭೇಟಿಯಾಗಲು ಎಷ್ಟು ಕಾಯುತ್ತಿದ್ದೀರಿ ಎಂದು ನನಗೆ ತುಂಬಾ ಖುಷಿಯಾಗಿದೆ. ನನ್ನನ್ನು ನಂಬಿರಿ, ನಿಮ್ಮೆಲ್ಲರನ್ನೂ ನೋಡಲು ನಾನು ಅಷ್ಟೇ ಹಾತೊರೆಯುತ್ತಿದ್ದೇನೆ’ ಎಂದು ಯಶ್ (ಯಶ್) ಅವರು ಬರಹ ಆರಂಭಿಸಿದ್ದಾರೆ.

‘ಈ ವರ್ಷ ನನ್ನ ಹುಟ್ಟುಹಬ್ಬದಂದು ನಿಮ್ಮನ್ನು ಭೇಟಿಯಾಗಲು ನಾನು ನಿಜವಾಗಿಯೂ ಬಯಸಿದ್ದೆ. ಆದರೆ 2026ರ ಮಾರ್ಚ್ 19 ರಂದು ನಿಮಗಾಗಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಸಲುವಾಗಿ ನಾನು ಈ ಚಿತ್ರದ ಕೆಲಸಗಳಲ್ಲಿ ಸಂಪೂರ್ಣವಾಗಿ ಮಗ್ನನಾಗಿದ್ದೇನೆ. ನಾನು ಈಗ ನಿಮ್ಮನ್ನು ವೈಯಕ್ತಿಕವಾಗಿ ಭೇಟಿಯಾಗಲು ಸಾಧ್ಯವಾಗಲಿಲ್ಲ’ ಎಂದು ಯಶ್ ಹೇಳಿದ್ದಾರೆ.

‘ನಾವು ಈಗ ಭೇಟಿಯಾಗಲು ಸಾಧ್ಯವಾಗದಿದ್ದರೂ, ನಾವು ಶೀಘ್ರದಲ್ಲೇ ಇನ್ನೂ ದೊಡ್ಡ ರೀತಿಯಲ್ಲಿ ಭೇಟಿಯಾಗುತ್ತೇವೆ ಎಂದು ಭರವಸೆ ನೀಡುತ್ತೇನೆ. ಈ ಮಧ್ಯೆ, ನಿಮ್ಮೆಲ್ಲರ ಶುಭಾಶಯಗಳನ್ನು ನಾನು ವೈಯಕ್ತಿಕವಾಗಿ ಪರಿಶೀಲಿಸುತ್ತೇನೆ ಮತ್ತು ನೀವು ಕಳುಹಿಸುವ ಪ್ರೀತಿಯನ್ನು ಸ್ವೀಕರಿಸುತ್ತೇನೆ’ ಎಂದು ಯಶ್ ಅವರು ಇನ್ಸ್ಟಾಗ್ರಾಮ್ ಸ್ಟೋರಿ ಮೂಲಕ ಅಭಿಮಾನಿಗಳಿಗೆ ಸಂದೇಶವನ್ನು ನೀಡಿದರು.

ಯಶ್ ಅವರು ‘ಕೆಜಿಎಫ್: ಅಧ್ಯಾಯ 2’ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದರು. ಈಗ ಅವರಿಗೆ ದೇಶಾದ್ಯಂತ ಅಭಿಮಾನಿಗಳು ಇದ್ದಾರೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗಾಗಿ ಎಲ್ಲರೂ ಕಾಯುತ್ತಿದ್ದಾರೆ. ಭಾರಿ ಬಜೆಟ್ ನಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಯಶ್ ಜನ್ಮದಿನದ ಪ್ರಯುಕ್ತ ಈ ಚಿತ್ರತಂಡದಿಂದ ಅಪ್‌ಡೇಟ್ ಸಿಗಲಿದೆ. ಅದಕ್ಕಾಗಿ ಕಾತರಕ್ಕಾಗಿ.

ಇದನ್ನೂ ಓದಿ: ‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್ ಬೋರ್ಡ್

ಗೀತು ಮೋಹನ್‌ದಾಸ್ ಅವರು ‘ಟಾಕ್ಸಿಕ್’ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಯಶ್ ಜೊತೆ ರುಕ್ಮಿಣಿ ವಸಂತ್, ತಾರಾ ಸುತಾರಿಯಾ, ಹುಮಾ ಖುರೇಷಿ, ನಯನತಾರಾ, ಕಿಯಾರಾ ಅಡ್ವಾಣಿ ಮುಂತಾದವರು ನಟಿಸುತ್ತಿದ್ದಾರೆ. ನಟಿಯರ ಫಸ್ಟ್ ಲುಕ್ ಪೋಸ್ಟರ್‌ಗಳು ಬಿಡುಗಡೆ ಆಗಿವೆ. ಈಗ ಯಶ್ ಪಾತ್ರದ ಬಗ್ಗೆ ತಿಳಿಯಲು ಫ್ಯಾನ್ಸ್ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *