ಇರಾಕ್, ಜುಲೈ 17: ಇರಾಕ್ನ ಐದು ಅಂತಸ್ತಿನ ಶಾಪಿಂಗ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು50 ಮಂದಿ ಸುಟ್ಟು ಕರಕಲಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ಪೂರ್ವ ಇರಾಕ್ನ ಅಲ್-ನಗರದ ಹೈಪರ್ಮಾರ್ಕೆಟ್ನಲ್ಲಿ ಸಂಭವಿಸಿದ ಭಾರಿ ಬೆಂಕಿ ಬೆಂಕಿ ಸಂಭವಿಸಿದೆ. ಅಲ್- ಕುಟ್ನಲ್ಲಿರುವ ಐದು ಅಂತಸ್ತಿನ ಕಟ್ಟಡದಲ್ಲಿ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ.ಈ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿಯ ಕೆನ್ನಾಲಿಗೆ ಆಕಾಶದೆತ್ತರಕ್ಕೆ ಚಾಚಿತ್ತು. ದಟ್ಟ ಹೊಗೆ, ಬೆಂಕಿ ಯಾರನ್ನಾದರೂ ಬೆಚ್ಚಿ ಬೀಳಿಸುವಂತಿತ್ತು.
ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್