Headlines

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು

ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್​​ ಅಪ್​​ ಕಂಡು ಅಧಿಕಾರಿಗಳೇ ಕಂಗಾಲು


ಅರಣ್ಯ ಇಲಾಖೆ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ: ಖದೀಮರ ಸೆಟ್ ಅಪ್ ಕಂಡು ಅಧಿಕಾರಿಗಳು ಕಂಗಾಲು

ತುಮಕೂರು, ಮಾರ್ಚ್ 27: ಅರಣ್ಯ ಇಲಾಖೆ ನೇಮಕಾತಿ ಹೆಸರಲ್ಲಿ ನಕಲಿ ತರಬೇತಿ ಕೇಂದ್ರ ನಡೆಸುತ್ತಿದ್ದ ಜಾಲವೊಂದು ತುಮಕೂರಿನಲ್ಲಿ ಇದೆ. ಬೆಳಗಾವಿಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳ 15 ಯುವಕರ ಕರೆತಂದಿದ್ದ ತಂಡ, ಇವರನ್ನು ಮೈಸೂರು ವಿಭಾಗದ ವಿವಿಧ ಹಂತಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲಸದ ಆದೇಶ ಸಿಕ್ಕಿರುವ ರೀತಿ ನಂಬಿತ್ತು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೀನಾಕ್ಷಿ ನೇಗಿಯವರ ಲೆಟರ್ ಹೆಡ್, ಅರಣ್ಯ ಇಲಾಖೆಯ ಲೋಗೋ ಸೇರಿದಂತೆ ಪ್ರಧಾನ ಕಾರ್ಯದರ್ಶಿ ಸಹಿ ಹಾಗೂ ಸೆಲ್ನ ನಕಲು ಖದೀಮರು, ನೇಮಕಾತಿ ಪತ್ರಗಳನ್ನು ಯುವಕರಿಗೆ ವಾಟ್ಸ್ ಆಯಪ್ ಮುಖಾಂತರ ಕಳುಹಿಸಿದ್ದಾರೆ ಎಂಬುದು ಬಯಲಾಗಿದೆ.

ತುಮಕೂರು ತಾಲೂಕಿನ ವಡ್ಡರಹಳ್ಳಿಯ ಪ್ರಭಾವಿ ವ್ಯಕ್ತಿ ವಾಲೆ ಚಂದ್ರರವರ ಪುತ್ರನ ತೋಟದ ಮನೆಯನ್ನು ಬಾಡಿಗೆ ಪಡೆದ ಗ್ಯಾಂಗ್ ಈ ರೀತಿಯ ಕೃತ್ಯ ಎಸಗಿದ್ದು, ಆರಂಭದಲ್ಲೇ ವಿಚಾರ ಬೆಳಕಿಗೆ ಬಂದಿದೆ. ತಿಂಗಳಿಗೆ 30 ಸಾವಿರ ಬಾಡಿಗೆಯಂತೆ ಮಾತನಾಡುತ್ತಿದ್ದ ಕೆಲವೇ ದಿನಗಳಲ್ಲಿ ತೋಟದ ಮನೆಯಲ್ಲಿ ನಾನಾ ಬದಲಾವಣೆಯಾಗಿದೆ. ಗಳಿಗೆ ಬಳಿದ ಬಣ್ಣ, ಬೋರ್ಡ್, ಅಪರಿಚಿತ 15 ಯುವಕರ ವಾಸ ಅನುಮಾನಾಸ್ಪದ ಕಾರಣ, ತೋಟದ ಮಾಲೀಕ ಹಾಗೂ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಹೀಗಾಗಿ ಸ್ಥಳ ಪರಿಶೀಲನೆಗೆ ಬಂದ ಅರಣ್ಯ ಅಧಿಕಾರಿಗಳು ಇವರ ಸೆಟ್ ಅಪ್ ಕಂಡು ಒಂದು ಕ್ಷಣ ದಂಗಾಗಿದ್ದಾರೆ. ವ್ಯವಸ್ಥಿತವಾಗಿ 15 ಯುವಕರ ಯಾಮಾರಿಸಿ ಹಣ ಪಡೆದ ಜೊತೆಗೆ ಇಲಾಖೆ ಹೆಸರು ತರಬೇತಿ ನೆಪದಲ್ಲಿ ಕರೆತಂದು ವಂಚಿಸಿರೋದು ಈ ವೇಳೆ ಗೊತ್ತಾಗಿದೆ. ಈ ಬಗ್ಗೆ ಪೊಲೀಸರಿಗೆ ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಕ್ಲಾಸಲ್ಲೇ ಮೆಡಿಕಲ್ ವಿದ್ಯಾರ್ಥಿನಿ ಲವ್ ಯು ಎಂದ ಪ್ರೊಪೋಸರ್ ಅರೆಸ್ಟ್

ಇನ್ನು ಈ ವಂಚನೆ ಜಾಲದಲ್ಲಿ ತುಮಕೂರಿನ ನಮಸ್ತೆ ಕೆಫೆಯ ಪವನ್, ನೆಲಮಂಗಲದ ಕಿರಣ್ ಹಾಗೂ ವಿನಯ್ ಎಂಬ ಮೂವರ ಹೆಸರು ಕೇಳಿ ಬಂದಿದೆ. ಸದ್ಯ ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರೆ, ತರಬೇತಿಗೆಂದು ಬಂದಿದ್ದ ಯುವಕರು ಮೋಸ ಹೋದ ಬಗ್ಗೆ ತಿಳಿದು ಕಂಗಾಲಾಗಿದ್ದಾರೆ. ಆದರೇ ಹೀಗೆ ವ್ಯವಸ್ಥಿತವಾಗಿ ಹಾಗೂ ಅಕ್ರಮವಾಗಿ ತರಬೇತಿ ಕೇಂದ್ರ ನಡೆಸುತಿದ್ದವರ ಹಿಂದೆ ಇರೋದ್ಯಾರು? ಯುವಕರು ವಂಚಕರ ಬಲೆಗೆ ಬಿದ್ದಿರೋದು ಹೇಗೆ? ಈ ರೀತಿಯ ಹಲವು ಪ್ರಶ್ನೆಗಳು ಮೂಡಿದ್ದು, ಪ್ರಕರಣದ ಮತ್ತಷ್ಟು ಮಾಹಿತಿ ಪೊಲೀಸರ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *