
ಬೆಂಗಳೂರು, ಮಾರ್ಚ್ 09: ಕಬ್ಬನ್‌ಪಾರ್ಕ್‌ನ ಶೌಚಾಲಯದ ಸಮೀಪ ಸಿಗರೇಟ್‌ಗೆ ಗಾಂಜಾ ತುಂಬಿಸಿ ಸೇದುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಫೋಟೋಗ್ರಾಫರ್‌ಗಳಾದ ವಿ.ಸಚಿನ್(21), ಪವನ್ ಕಲ್ಯಾಣ್(22) ಬಂಧಿತರಾಗಿದ್ದರೆ, ಫೋಟೋ ತೆಗೆಯುವ ಉದ್ದೇಶದಿಂದ ಇವರು ಪಾರ್ಕ್‌ಗೆ ಬಂದಿದ್ದರು. ಆದರೆ ಗಾಂಜಾ ಸೇದುತ್ತಿದ್ದ ಇವರನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಕಬ್ಬನ್‌ಪಾರ್ಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಇಬ್ಬರನ್ನೂ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಗಾಂಜಾ ಸೇವನೆ ಮಾಡಿರುವುದು. ಈ ಹಿನ್ನೆಲೆ ಎನ್‌ಡಿಪಿಎಸ್ ಕಾಯ್ದೆ ಕಲಂ 27(ಬಿ) ಅನ್ವಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ, ಇವರು ಗಾಂಜಾ ಖರೀದಿಸಿದ್ದು? ಪೆಡ್ಲರ್‌ಗಳು ಯಾರ ಬಗ್ಗೆ ತನಿಖೆ ತನಿಖೆಗಿಳಿದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.