ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ


ವಿಜಯಪುರ, ಜನವರಿ 26: ಮೈಸೂರು ಜಿಲ್ಲೆ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್ ರಸ್ತೆಯಲ್ಲಿರುವ `ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್‌ಗೆ ನುಗ್ಗಿದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆಗೆ ಬೆಲೆ.

ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ದರೋಡೆ

ಮಹಾರುದ್ರ ಕಂಚಗಾರ ಅವರಿಗೆ ಸೇರಿರುವ ಬಂಗಾರದ ಅಂಗಡಿಯಲ್ಲಿ ದರೋಡೆ ನಡೆದಿದ್ದು, ಅಂಗಡಿಗೆ ಬಂದಿದ್ದ ವೃದ್ಧೆಯನ್ನ ಸಹ ಪಿಸ್ತೂಲ್ ತೋರಿಸಿ ಹೆದರಿಸಿ ಆರೋಪಿಗಳನ್ನು ಕಳುಹಿಸಿದ್ದಾರೆ. ಜೊತೆಗೆ ದರೋಡೆಕೋರರು ಈ ವೇಳೆ ಗಾಳಿಯಲ್ಲಿ 2 ಸುತ್ತು ಗುಂಡು ಕೂಡ ಹಾರಿಸಿದ್ದು, ಆತ್ಮಲಿಂಗ ಹೂಗಾರ ಎಂಬುವನ ಕಾಲಿಗೆ ಬುಲೆಟ್ ತಾಗಿದೆ. ಗಾಯಾಳುವನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿನ್ನ ದೋಚಿದ ಆರೋಪಿಗಳು ಮಹಾರಾಷ್ಟ್ರದತ್ತ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಹುಣಸೂರು ಚಿನ್ನದಂಗಡಿ ದರೋಡೆ ಪ್ರಕರಣ; ಬಿಹಾರ ಮೂಲದ ಮೋಸ್ಟ್ ವಾಂಟೆಡ್ ಆರೋಪಿ ಪೊಲೀಸರ ಬಲೆಗೆ

ಸಿಸಿ ಕ್ಯಾಮರಾದಲ್ಲಿ ದರೋಡೆ ದೃಶ್ಯ ಸೆರೆ

ದರೋಡೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್ಪಿ ಕಟ್ಟಿಮನಿ, ಇನ್ಸ್ ಪೆಕ್ಟರ್ ಪರಶುರಾಮ ಮನಗೂಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿನ್ನದಂಗಡಿಗೆ ಎಂಟ್ರಿ ಕೊಟ್ಟು ಗನ್ ತೋರಿಸಿ ಆರೋಪಿಗಳು ದರೋಡೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಝಳಕಿ ಪೊಲೀಸ್ ಠಾಣಾ ಪ್ರಕರಣ ನಡೆದಿದ್ದು, ದರೋಡೆಕೋರರ ಬಂಧನಕ್ಕೆ ಖಾಕಿ ಬಲೆ ಬೀಸಿದೆ. ಆರೋಪಿಗಳು ಅಂಗಡಿಯಿಂದ ಏನೇನು ರಾಬರಿ ಮಾಡಿದ್ದಾರೆಂಬ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ. ಮತ್ತೊಂದೆಡೆ ಮೇಲಿಂದ ಮೇಲೆ ನಡೆಯುತ್ತಿರುವ ದರೋಡೆ ಪ್ರಕರಣಗಳು ಚಿನ್ನದಂಗಡಿ ಮಾಲಕರ ನಿದ್ರೆಗೆಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *