Headlines

ಇವನೆಂಥಾ ಪಾಪಿ ತಂದೆ: ಹೆತ್ತ ಮಕ್ಕಳನ್ನೂ ಬಿಟ್ಟಿಲ್ಲ ಕಾಮುಕ; ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ

ಇವನೆಂಥಾ ಪಾಪಿ ತಂದೆ: ಹೆತ್ತ ಮಕ್ಕಳನ್ನೂ ಬಿಟ್ಟಿಲ್ಲ ಕಾಮುಕ; ಚಿತ್ರದುರ್ಗದಲ್ಲೊಂದು ಅಮಾನವೀಯ ಘಟನೆ


ಚಿತ್ರದುರ್ಗ, ಡಿಸೆಂಬರ್ 05: ತಂದೆ ಎಂದರೆ ಮಕ್ಕಳ ಪಾಲಿನ ಮೊದಲ ಹೀರೋ. ಅದರಲ್ಲೂ ಹೆಣ್ಣು ಮಕ್ಕಳಿಗಂತೂ ತಾಯಿಗಿಂತ ಆತನೇ ಅಚ್ಚುಮೆಚ್ಚು. ಆದರೆ ಚಿತ್ರದುರ್ಗಅಲ್ಲೊಬ್ಬ ಕೀಚಕ ಈ ಅರ್ಥಕ್ಕೆ ಮಸಿ ಬಳಿದಿದ್ದಾನೆ. ಮದ್ಯದ ಅಮಲಿನಲ್ಲಿ ತನ್ನ ಹೆಣ್ಣುಮಕ್ಕಳ ಮೇಲೆಯೇ ಎರಗಿ ವಿಕೃತಿ ಮೆರೆದಿದ್ದಾನೆ. ಪುತ್ರಿಯರು ಕಾಣದೆ ತನ್ನ ಹೆತ್ತ ತಾಯಿಯ ಮೇಲೂ ಈತ ಅಟ್ಟಹಾಸ ತೋರಲು ಮುಂದಾಗಿರುವ ಆರೋಪವೂ ಕೇಳಿಬಂದಿದೆ.

ಘಟನೆ ಏನು?

ಗಣಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಮಂಜುನಾಥ್ ತನ್ನ 13 ಮತ್ತು 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಜಮೀನಿಗೆ ಕರೆದೊಯ್ದು ಮಕ್ಕಳ ಮೇಲೆ ಈತನ ದೌರ್ಜನ್ಯ ಎಸಗಿರುವ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಕಾನೂನು ಕ್ರಮಕ್ಕೆ ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಕೂಡ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಮದ್ವೆಯಾಗಿದ್ರೂ ಅತ್ತೆ ಮಗಳ ಮೇಲಾಸೆ, ಆಕೆ ದೂರವಾದ ಸಿಟ್ಟಿಗೆ ಮಾವ ಮಾಡಿದ್ದೇನು ಗೊತ್ತಾ?

ಮದ್ಯದ ಅಮಲಿನಲ್ಲಿ ಇರುತ್ತಿದ್ದ ಮಂಜುನಾಥ ಈ ಹಿಂದೆ ತನ್ನ ಮೇಲೂ ಲಯಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ. ಈ ವೇಳೆ ತಾನು ಆತನಿಂದ ತಪ್ಪಿಸಿಕೊಂಡಿದ್ದೆ. ಬಳಿಕ ಆ ಮನೆಯನ್ನು ಬಿಟ್ಟು ಬೇರೆಡೆ ಹೋಗಿದ್ದೆ ಎಂದು ಆರೋಪಿಯ ತಾಯಿ ಕೂಡ ಗಂಭೀರ ಆರೋಪ ಮಾಡಿದ್ದಾರೆ. ಆತ ಮಕ್ಕಳಿಗೆ ಏನಾದರೂ ತೊಂದರೆ ಮಾಡಿದ್ರೆ ಎಂಬ ಪ್ರಶ್ನೆಯೂ ತನಗೆ ಬಂದಿತ್ತು. ಆದರೆ, ಅವರಿಬ್ಬರೂ ಅವನದ್ದೇ ಮಕ್ಕಳಾಗಿರುವ ಕಾರಣ ಅವರು ಹೀಗೆ ಮಾಡಲ್ಲ ಎಂದು ತಿಳಿದಿದ್ದೆ. ಮಕ್ಕಳನ್ನೂ ಓದಲೂ ಕಳುಹಿಸಲು. ಈ ವಿಚಾರವನ್ನು ಅವರು ಟೀಚರ್ ಬಳಿಗೂ ಹೇಳಿಸಿಕೊಂಡರಂತೆ. ಇಂತಹ ನೀಚನಿಗೆ ಗಲ್ಲುಶಿಕ್ಷೆ ಆಗಬೇಕು. ಅವನನ್ನು ಬಿಟ್ಟರೆ ಬೇರೆಯವರ ಮಕ್ಕಳಿಗೂ ತೊಂದರೆ ಆಗಬಹುದು. ನಮಗಾದ ತೊಂದರೆ ಬೇರೆಯವರಿಗೆ ಆಗಬಾರದು ಎಂದ ಭಾವುಕ.

ಇನ್ನು ಆರೋಪಿ ಮಂಜುನಾಥ್ ವಿರುದ್ಧ ಕಿಡಿ ಕಾರಿರುವ ಗ್ರಾಮಸ್ಥರು, ತನ್ನ ಮಕ್ಕಳ ಮೇಲೆಯೇ ತಂದೆಯಿಂದ ಅತ್ಯಾಚಾರ ಆಗಿರೋದು ಅವರ ಕೆಟ್ಟ ಹೆಸರು. ಗ್ರಾಮದಲ್ಲಿ ಇಂತಹ ಘಟನೆ ನಡೆದಿಲ್ಲ ಆದರೆ ತನ್ನ ಮಕ್ಕಳನ್ನೇ ಬಿಟ್ಟಿಲ್ಲ. ಶಿಕ್ಷಕರ ಮುಂದೆ ಆ ಹೆಣ್ಣುಮಕ್ಕಳು ವಿಷಯ ಹೇಳಿದಾಗ ಘಟನೆ ಬೆಳಕಿಗೆ ಬಂದಿದೆ. ಹೀಗಾಗಿ ಈತನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಮಕ್ಕಳ ಮೇಲೆ ವಿಕೃತಿ ಮೆರೆದಿರುವ ಆರೋಪಿಯನ್ನು ಬಂಧಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *