ಹರಾರೆ: 2026ರ ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯ ಫೈನಲ್ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಭಾರತ ಭರ್ಜರಿ ಆರಂಭ ಪಡೆದಿದೆ. ಇದರ ಜತೆಗೆ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಚೊಚ್ಚಲ ಅಂಡರ್-19 ವಿಶ್ವಕಪ್ ಶತಕ ಸಿಡಿಸುವ ಮೂಲಕ ಅಪರೂಪದ ದಾಖಲೆ ಬರೆದಿದ್ದಾರೆ.

ಐಸಿಸಿ ಅಂಡರ್ 19 ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಹಾಗೂ ಭಾರತ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ. ಆರಂಭಿಕ ಆಘಾತದ ಹೊರತಾಗಿಯೂ ಟೀಂ ಇಂಡಿಯಾ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಆಗಿ ಹೊರಹೊಮ್ಮಿದ್ದ ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣಿತ್ತು. ಇದೀಗ ನಿರೀಕ್ಷೆಯಂತೆಯೇ ಫೈನಲ್ನಲ್ಲಿ ಶತಕ ಸಿಡಿಸುವ ಮೂಲಕ ತಾವಾಡುತ್ತಿರುವ ಚೊಚ್ಚಲ ಅಂಡರ್-19 ವಿಶ್ವಕಪ್ ಫೈನಲ್ ಅನ್ನು ಸ್ಮರಣೀಯವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು, ಸೆಮಿಫೈನಲ್ನಲ್ಲಿ ಆಕರ್ಷಕ ಶತಕ ಸಿಡಿಸಿದ ಆರೋನ್ ಜಾರ್ಜ್ ಕೇವಲ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ವೈಭವ್ ಸೂರ್ಯವಂಶಿ ಹಾಗೂ ನಾಯಕ ಆಯುಷ್ ಮಾಥ್ರೆ ಆಕರ್ಷಕ ಶತಕದ ಜತೆಯಾಟವಾಡುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ಯುತ್ತಿದ್ದಾರೆ.

ಮೊದಲ 20 ಎಸೆತಗಳಲ್ಲಿ ಕೇವಲ 23 ರನ್ ಗಳಿಸಿದ್ದ ವೈಭವ್ ಸೂರ್ಯವಂಶಿ, ಆ ಬಳಿಕ ಮೈದಾನಕ್ಕೆ ಹೊಂದಿಕೊಳ್ಳುತ್ತಿದ್ದಂತೆಯೇ ಮೈಚಳಿ ಬಿಟ್ಟು ಬ್ಯಾಟ್ ಬೀಸಲಾರಂಭಿಸಿದರು. ಪರಿಣಾಮ ಕೇವಲ 32 ಎಸೆತಗಳಲ್ಲಿ ವೈಭವ್ ಆಕರ್ಷಕ ಅರ್ಧಶತಕ ಸಿಡಿಸಿದರು. ಇದಾದ ಬಳಿಕವೂ ವೈಭವ್ ತಮ್ಮ ಬ್ಯಾಟಿಂಗ್ ವೈಭವವನ್ನು ಮುಂದುವರೆಸಿದರು.

ಇಂಗ್ಲೆಂಡ್ ಬೌಲರ್ಗಳನ್ನು ಮನಬಂದಂತೆ ದಂಡಿಸಿದ ಸೂರ್ಯವಂಶಿ, ಐಸಿಸಿ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರು. ವೈಭವ್ ಸೂರ್ಯವಂಶಿ ಕೇವಲ 55 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 8 ಮುಗಿಲೆತ್ತರದ ಸಿಕ್ಸರ್ಗಳ ನೆರವಿನಿಂದ ಸಿಕ್ಸರ್ ಸಿಡಿಸಿ ಸಂಭ್ರಮಿಸಿದರು.

ಇನ್ನು 17ನೇ ಓವರ್ ಬೌಲಿಂಗ್ ಮಾಡಲಿಳಿದ ಫರ್ಹಾನ್ ಅಹಮದ್ ಎದುರು ಒಂದೇ ಓವರ್ನಲ್ಲಿ ಮೂರು ಸಿಕ್ಸರ್ ಹಾಗೂ ಒಂದು ಬೌಂಡರಿ ಸಹಿತ 22 ರನ್ ಚಚ್ಚಿದರು. ಇನ್ನು ಇದಷ್ಟೇ ಅಲ್ಲದೇ ಅಂಡರ್ 19 ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ವೈಭವ್ ಪಾಲಾಗಿದೆ. ಸದ್ಯ ವೈಭವ್ 23 ಸಿಕ್ಸರ್ ಸಿಡಿಸಿ ಹೊಸ ಮೈಲಿಗಲ್ಲು ನೆಟ್ಟಿದ್ದಾರೆ. ಈ ಮೊದಲು 2022ರ ವಿಶ್ವಕಪ್ನಲ್ಲಿ ಡೆವಾಲ್ಡ್ ಬ್ರೆವೀಸ್ 18 ಸಿಕ್ಸರ್ ಸಿಡಿಸಿದ್ದು ಇಲ್ಲಿಯವರೆಗಿನ ದಾಖಲೆಯಾಗಿತ್ತು.

Source link
ಅಂಡರ್-19 ವಿಶ್ವಕಪ್ ಫೈನಲ್: ಇಂಗ್ಲೆಂಡ್ ಬೌಲರ್ಗಳನ್ನು ಚೆಂಡಾಡಿ ಚೊಚ್ಚಲ ಶತಕ ಚಚ್ಚಿದ ವೈಭವ್ ಸೂರ್ಯವಂಶಿ! ಸಿಕ್ಸರ್ನಲ್ಲೂ ಹೊಸ ದಾಖಲೆ