
ಕೊನೆಗೆ ಉಗ್ರಂ ಮಂಜು ಭಾವಿ ಪತ್ನಿ ಸಂಧ್ಯಾ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು. ಈಗ ಗಿಲ್ಲಿ ನಟ ಈ ಜೋಡಿಯ ಮದುವೆ ಅಥವಾ ಆರತಕ್ಷತೆಗೆ ಬರುತ್ತಾರಾ ಎನ್ನುವ ಪ್ರಶ್ನೆ ಹಲವರಲ್ಲಿ ಮೂಡಿದೆ. ಇದಕ್ಕೆ ಉತ್ತರ ಅಂದು ಸಿಗಲಿದೆ.
ಧರ್ಮಸ್ಥಳದಲ್ಲಿ ಜನವರಿ 23 ರಂದು ಮದುವೆ ಸರಳವಾಗಿ ನಡೆಯಲಿದ್ದು, ಬಳಿಕ ಬೆಂಗಳೂರಿನಲ್ಲಿ ಅದ್ದೂರಿಯಾಗಿ ರಿಸೆಪ್ಶನ್ ನಡೆಯಲಿದೆ ಎಂದು ತಿಳಿದುಬಂದಿದೆ.
ಮದುವೆಯ ನಂತರ ಬೆಂಗಳೂರಿನಲ್ಲಿ ಚಿತ್ರರಂಗದ ಗಣ್ಯರಿಗಾಗಿ ಅದ್ಧೂರಿ ಆರತಕ್ಷತೆ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.