Headlines

ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿಗಾಗಿ ಮಂಡಿಸಿರುವ ಬಜೆಟ್ ಕುರಿತಂತೆ ಸಾಕಷ್ಟು ಪರ-ವಿರೋಧದ ಚರ್ಚೆಗಳು ವ್ಯಕ್ತವಾಗಿವೆ. ಇದೀಗ ರಾಜ್ಯಸಭಾ ಸಂಸದರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವಿರೇಂದ್ರ ಹೆಗ್ಗಡೆಯವರು ಬಜೆಟ್‌ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಒಂಬತ್ತನೇ ಕೇಂದ್ರ ಬಜೆಟ್, ವಿಕಸಿತ ಭಾರತಕ್ಕೆ ಮುನ್ನುಡಿ ಎಂದು ಹಲವರು ಅಭಿಪ್ರಾಯಪಟ್ಟಿದ್ದರೇ, ಇನ್ನೂ ಕೆಲವರು ಇದು ಜನವಿರೋಧಿ, ನಿರಾಶಾದಾಯಕ ಬಜೆಟ್ ಎಂದು ಟೀಕಿಸಿದ್ದಾರೆ

ಇನ್ನು ರಾಜ್ಯಸಭಾ ಸಂಸದರಾದ ಡಾ. ವಿರೇಂದ್ರ ಹೆಗ್ಗಡೆಯವರು, ಬಜೆಟ್‌ನಲ್ಲಿ ಗ್ರಾಮೀಣ, ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಅಂಶಗಳನ್ನು ಪ್ರಸ್ತಾಪಿಸಲಾಗಿದೆ. ಅಸಮಾನತೆ ಕಡಿಮೆ ಮಾಡಲು ಮತ್ತು ಜೀವನೋಪಾಯ ಮಾರ್ಗಗಳನ್ನು ಸೃಷ್ಟಿಸಲು ಬಜೆಟ್‌ ಪೂರಕವಾಗಿದೆ.

ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ ಕೌಶಲಗಳ ಮೂಲಕ ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿದಾಗ ಅದು ಸ್ವಾವಲಂಬನೆ, ಆಂತರಿಕ ಬೆಳವಣಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಪೂರಕವಾಗುವಂತೆ ಈ ಬಾರಿಯ ಬಜೆಟ್ ಮಂಡಿಸಲಾಗಿದೆ.

ದೇಶದ ಪ್ರಗತಿಯ ತಳಹದಿಯಾಗಿ ಮಾನವ ಸಾಮರ್ಥ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಬಜೆಟ್ ಸೃಜನಾತ್ಮಕ ಬದಲಾವಣೆಯನ್ನು ಸೂಚಿಸುತ್ತದೆ.

ಆರೋಗ್ಯ, ಶಿಕ್ಷಣ, ಆಯುರ್ವೇದ ಮತ್ತು ತರಬೇತಿ ಬಗ್ಗೆ ವಿಶೇಷ ಒತ್ತು ನೀಡಿರುವುದು ಸ್ವಾಗತಾರ್ಹ. ರೋಗನಿರೋಧಕ ಆರೈಕೆ ಮತ್ತು ಮಾನವಕೇಂದ್ರಿತ ಅಭಿವೃದ್ಧಿಯು ಸ್ಥಿತಿಸ್ಥಾಪಕ ಸಮಾಜಕ್ಕೆ ಅಗತ್ಯ ಎಂಬುದನ್ನು ವಿಶ್ಲೇಷಿಸಲಾಗಿದೆ.

ಬಜೆಟ್‌ ಆರೋಗ್ಯ ಪ್ರವಾಸೋದ್ಯಮಕ್ಕೆ ಹೊಸ ಆಯಾಮವನ್ನು ನೀಡಿದೆ. ಪರಿಣಾಮವಾಗಿ ಭಾರತವನ್ನು ಸಮಗ್ರ ಚಿಕಿತ್ಸೆಯ ಜಾಗತಿಕ ತಾಣವಾಗಿ ಮಾರ್ಪಾಡು ಮಾಡುತ್ತದೆ. ವಿಶೇಷವಾಗಿ ಗ್ರಾಮೀಣ ಪ್ರದೇಶ ಮತ್ತು ಉದಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯಗಳನ್ನು ಬಲಪಡಿಸುವ ಆಶಯ ಹೊಂದಿದೆ ಎಂದು ಡಿ. ವೀರೇಂದ್ರ ಹೆಗ್ಗಡೆ, ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರು ಹೇಳಿದ್ದಾರೆ.

Source link

Leave a Reply

Your email address will not be published. Required fields are marked *