Headlines

ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀರು: ಉತ್ತರ ಪ್ರದೇಶದ ಎಸ್​ಪಿ ಸಂಸದ ಆಕ್ರೋಶ

ಬೆಂಗಳೂರಿನದ್ದು ಅತ್ಯಂತ ಕೆಟ್ಟ ಟ್ರಾಫಿಕ್, ನಿಷ್ಪ್ರಯೋಜಕ ಸಂಚಾರ ಪೊಲೀರು: ಉತ್ತರ ಪ್ರದೇಶದ ಎಸ್​ಪಿ ಸಂಸದ ಆಕ್ರೋಶ


ಬೆಂಗಳೂರು ಟ್ರಾಫಿಕ್ (ಸಂಗ್ರಹ ಚಿತ್ರ) ಹಾಗೂ ಎಸ್ ಪಿ ಸಂಸದ ರಾಜೀವ್ ರೈ

ಬೆಂಗಳೂರು, ಡಿಸೆಂಬರ್ 1: ಬೆಂಗಳೂರು (ಬೆಂಗಳೂರು) ರಸ್ತೆ ಗುಂಡಿಗಳ ಬಗ್ಗೆ ಉದ್ಯಮಿಗಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು ಇತ್ತೀಚೆಗೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ನಂತರ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಉದ್ಯಮಿಗಳ ಜೊತೆ ಮಾತುಕತೆಯನ್ನೂ ನಡೆಸಿದ್ದರು. ಇದೀಗ ಬೆಂಗಳೂರಿನ ಹಡಗೆಟ್ಟ ಟ್ರಾಫಿಕ್ ಬಗ್ಗೆ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಟ್ರಾಫಿಕ್ ಬಿಸಿ ಅವರಿಗೂ ಭಾನುವಾರ ತಟ್ಟಿತ್ತು. ಈ ಬಗ್ಗೆ ಸಾಮಾಜಿಕ ಮಾಧ್ಯಮದ ಮೂಲಕ ಸಂದೇಶ ಪ್ರಕಟಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಟ್ಯಾಗ್ ಮಾಡಿದ್ದಾರೆ.

ಎಸ್ ಪಿ ಸಂಸದ ರಾಜೀವ್ ರೈ ಎಕ್ಸ್ ಸಂದೇಶದಲ್ಲಿ ಏನಿದೆ?

‘ಮಾನ್ಯ ಕರ್ನಾಟಕದ ಮುಖ್ಯಮಂತ್ರಿಗಳೇ ಕ್ಷಮಿಸಿ, ಬೆಂಗಳೂರಿನದ್ದು ಅತ್ಯಂತ ಕೆಟ್ಟ ಸಂಚಾರ ವ್ಯವಸ್ಥೆ. ಜವಾಬ್ದಾರಿ ಇಲ್ಲದ, ಪ್ರಯೋಜನಕ್ಕೆ ಬಾರದ ಸಂಚಾರ ಪೊಲೀಸ್. ಅವರು ಕನಿಷ್ಠಪಕ್ಷ ದೂರವಾಣಿ ಕರೆಯನ್ನು ಕೂಡ ಸ್ವೀಕರಿಸುವುದಿಲ್ಲ. ನಾನು ಎಷ್ಟು ಬಾರಿ ಫೋನ್ ಮಾಡಿದೆ ಎಂಬುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕೂಡ ಇಲ್ಲಿ ಲಗತ್ತಿಸಿದ್ದೇನೆ. ಸುಮಾರು ಒಂದು ಗಂಟೆಯಿಂದ ನಾವು ರಾಜಕುಮಾರ್ ಸಮಾಧಿ ಬಳಿ ರಸ್ತೆಯಲ್ಲಿ ಸಂಚಾರದಟ್ಟಣೆಯಲ್ಲಿ ಸಿಲುಕಿದ್ದೇವೆ. ನಮಗೆ ವಿಮಾನ ತಪ್ಪಲಿದೆ. ಸಂಸತ್ ಅಧಿವೇಶನಕ್ಕೆ ಹಾಜರಾಗಲು ಕೂಡ ಅಡ್ಡಿಯಾಗಲಿದೆ. ಇಷ್ಟೊಂದು ಸಂಚಾರ ದಟ್ಟಣೆ, ಟ್ರಾಫಿಕ್ ಜಾಮ್ ಸುತ್ತಲೂ ಒಬ್ಬ ಪೊಲೀಸ್ ಕೂಡ ಕಾಡುತ್ತಿಲ್ಲ. ಈ ಸುಂದರ ನಗರದ ಹೆಸರು ಮತ್ತು ಮೋದಿಯನ್ನು ಹಾಳು ಮಾಡಲು ಈ ಅಸಮರ್ಥ ಸಂಚಾರ ಪೊಲೀಸ್ ಅಧಿಕಾರಿಗಳು ಸಾಕು. ಈ ಬೆಂಗಳೂರು ಸಂಚಾರದ ದಟ್ಟಣೆ ಅತ್ಯಂತ ಕುಖ್ಯಾತಿ ಗಳಿಸಿದೆ’ ಎಂದು ರಾಜೀ ರೈ ಸಂದೇಶದಲ್ಲಿ ಭಾನುವಾರ ಸಂಜೆ ಉಲ್ಲೇಖಿಸಿದ್ದಾರೆ.

ಎಸ್ ಪಿ ಸಂಸದ ರಾಜೀವ್ ರೈ ಎಕ್ಸ್ ಸಂದೇಶ

ಇಷ್ಟೇ ಅಲ್ಲದೆ, ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸಂಬಂಧಿಸಿದ ಯಾವೆಲ್ಲ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿದರೂ ಅವುಗಳನ್ನು ತೆರೆಯಲು ಶಾಟ್ ಲಗತ್ತಿಸಿದ್ದಾರೆ. ಯಾವ ಕರೆ ಟ್ರಾಫಿಕ್ ವೈದ್ಯರಿಗೆ ಸರಿಹೊಂದುವುದಿಲ್ಲ.

ಈ ಎಕ್ಸ್ ಸಂದೇಶದ ಬಗ್ಗೆ ಈಗ ವ್ಯಾಪಕ ಚರ್ಚೆಯಾಗುತ್ತಿದೆ. ನೆಟ್ಟಿಗರು ಅನೇಕ ರೀತಿಯ ಕಮೆಂಟ್ಗಳನ್ನು ಮಾಡಿದ್ದಾರೆ.

ಇದನ್ನೂ ಓದಿ: 5 ಪಾಲಿಕೆಗಳಿಂದ ಜಿಬಿಎ ಆರ್ಥಿಕ ದಿವಾಳಿ! ಅಂಕಿಅಂಶ ಸಹಿತ ಕಾರಣ ಬಿಚ್ಚಿಟ್ಟ ಬಿಜೆಪಿ ಮುಖಂಡ, ಸಿಎಂಗೆ ಪತ್ರ

ಈಮಧ್ಯೆ, ಸಂಸದ ರಾಜೀವ್ ರೈ ಅಸಮಾಧಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ದೆಹಲಿಯಲ್ಲಿ ರಾಜೀವ್ ರೈ ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಬೆಂಗಳೂರು ಏನು, ಅದರ ಮಹತ್ವ ಏನು ಎಂಬ ಬಗ್ಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಂದು ಪ್ರಕಟಿಸಲಾಗಿದೆ – 12:57 pm, ಸೋಮ, 1 ಡಿಸೆಂಬರ್ 25





Source link

Leave a Reply

Your email address will not be published. Required fields are marked *