ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (ಡೊನಾಲ್ಡ್ ಟ್ರಂಪ್) ಅವರು ಬೆದರಿಕೆ ಹಾಕುವುದನ್ನು ನಿಲ್ಲಿಸಿಲ್ಲ. ಅಮೆರಿಕದ ಅಧ್ಯಕ್ಷರಿಗೆ ಕಿರಿಕಿರಿ ತಂದಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್ನಲ್ಲಿ ಅವರು ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (ಯುಎಸ್ ಸುಂಕಗಳು) ಅನ್ನು ಹೆಚ್ಚಿಸಿದ್ದಾರೆ.
ಭಾರತದ ಮೇಲೆ ಅಮೆರಿಕ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ ಹೆಚ್ಚಿನ ಮಟ್ಟದ ಟ್ಯಾರಿಫ್ ಹಾಕುವುದಾಗಿ ಟ್ರಂಪ್ ಬೆದರಿಕೆ ಹಾಕುತ್ತಿದ್ದಾರೆ. ತನ್ನನ್ನು ಖುಷಿ ಪಡಿಸದಿದ್ದರೆ ಟ್ಯಾರಿಫ್ ಬರೆ ಹಾಕಬೇಕಾದೀತು ಎಂದು ಎಚ್ಚರಿಕೆ ಕೊಡುತ್ತಿದ್ದಾರೆ.
ಇದನ್ನೂ ಓದಿ: ತೈಲಸಮೃದ್ಧ ವೆನಿಜುವೆಲಾ ಮೇಲೆ ಅಮೆರಿಕ ದಾಳಿ; ಭಾರತಕ್ಕೆ ಎಷ್ಟು ನಷ್ಟ?
‘ಅವರು ನನ್ನನ್ನು ಖುಷಿಪಡಿಸಲು ಬಯಸುತ್ತಾರೆ. ಪಿಎಂ ಮೋದಿ ಬಹಳ ಒಳ್ಳೆಯ ಮನುಷ್ಯ, ಒಳ್ಳೆಯ ವ್ಯಕ್ತಿ. ನಾನು ಖುಷಿಯಾಗಿಲ್ಲ ಅಂತ ಅವರಿಗೆ ಗೊತ್ತು. ನನ್ನನ್ನು ಸಂತೋಷವಾಗಿ ಇಡುವುದು ಮುಖ್ಯ. ಅವರು ವ್ಯಾಪಾರ ಮಾಡುತ್ತಾರೆ. ನಾವು ಅವರ ಮೇಲೆ ಬಹಳ ಬೇಗ ಟ್ಯಾರಿಫ ಹೆಚ್ಚಿಸಬಲ್ಲೆವು..’ ಎಂದು ಟ್ರಂಪ್ ಹೇಳಿರುವ ಆಡಿಯೋ ತುಣಕನ್ನು ಎನ್ಐ ಸುದ್ದಿ ಸಂಸ್ಥೆ ತನ್ನ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಉಕ್ರೇನ್ ಮೇಲೆ ದಾಳಿ ಮಾಡಿದ್ದಕ್ಕೆ ಅಮೆರಿಕವು ರಷ್ಯಾ ಮೇಲೆ ನಿಷೇಧ ಕ್ರಮ ತೆಗೆದುಕೊಂಡಿದೆ. ರಷ್ಯಾದ ಆರ್ಥಿಕತೆ ಉಳಿಯಲು ಅದರ ತೈಲವೂ ಪ್ರಮುಖ ಆಧಾರವಾಗಿದೆ. ರಷ್ಯಾದ ತೈಲವನ್ನು ಯಾರೂ ಖರೀದಿಸಬಾರದು ಎಂದು ಅಂತರರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸುತ್ತಿದೆ. ಆದರೆ, ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಸಿಗುವುದರಿಂದ ಭಾರತ ಆ ಅವಕಾಶವನ್ನು ಬಳಸಿಕೊಳ್ಳುತ್ತಿದೆ. ಚೀನಾ ಮತ್ತು ಭಾರತವು ರಷ್ಯಾದಿಂದ ಅತಿಹೆಚ್ಚು ತೈಲ ಖರೀದಿಸುತ್ತಿರುವ ಎರಡು ರಾಷ್ಟ್ರಗಳು.
ಇದನ್ನೂ ಓದಿ: ತೈಲ ಸಂಪತ್ತಿನ ಮೇಲೆ ಕಣ್ಣಿಟ್ಟರಾ ಟ್ರಂಪ್? ವೆನೆಜುವೆಲಾ ಮೇಲಿನ ಅಮೆರಿಕ ದಾಳಿ ಕುರಿತ ಕುತೂಹಲಕಾರಿ ಸಂಗತಿ ಇಲ್ಲಿದೆ
ಕಳೆದ ವರ್ಷ ಟ್ರಂಪ್ ಅಧಿಕಾರಕ್ಕೆ ಬಂದಾಗ ಎಲ್ಲಾ ದೇಶಗಳ ಮೇಲೂಸುಂಕ ಹಾಕಿದರು. ಭಾರತದ ಮೇಲೆ ಶೇ. 25ರಷ್ಟು ಪ್ರತಿಸುಂಕ ಹಾಕಿದರು. ನಂತರ, ವಿದೇಶಿ ತೈಲ ಖರೀದಿಸುತ್ತಿರುವ ಕಾರಣವೊಡ್ಡಿ ಹೆಚ್ಚುವರಿ ಶೇ. 25ರಷ್ಟು ಟ್ಯಾರಿಫ್ ಹಾಕಿದ್ದಾರೆ. ಅಲ್ಲಿಗೆ ಭಾರತದ ಸರುಕುಗಳ ಮೇಲೆ ಅಮೆರಿಕ ಹಾಕುತ್ತಿರುವ ಟ್ಯಾರಿಫ್ ಶೇ. 50ರಷ್ಟಾಗಿದೆ. ಇದನ್ನೂ ಮೀರಿಸಿ ಹೆಚ್ಚಿನ ಟ್ಯಾರಿಫ್ ಹಾಕುವುದಾಗಿ ಟ್ರಂಪ್ ಈಗ ಬೆದರಿಕೆ ಹಾಕುತ್ತಿದ್ದಾರೆ.
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ