Headlines

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ!

ಧರ್ಮಗುರುವಿನಿಂದ ಬಾಲಕಿಗೆ ಲೈಂಗಿಕ ಕಿರುಕುಳ; ಮಗು ಹುಟ್ಟೋವರೆಗೂ ಗರ್ಭಿಣಿಯಾದ ವಿಷಯವೇ ಗೊತ್ತಾಗಲಿಲ್ಲ!


ಹಾಪುರ್, ಫೆಬ್ರವರಿ 19: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ (ದೈಹಿಕ ಕಿರುಕುಳ) ಎಸಗಿದ ಆರೋಪದ ಮೇಲೆ ಇಸ್ಲಾಂ ಎಂಬ ಧರ್ಮಗುರುವನ್ನು ಬಂಧಿಸಲಾಗಿದೆ. ಆ ಬಾಲಕಿ ತೀವ್ರ ಹೊಟ್ಟೆ ನೋವು ಅನುಭವಿಸಿ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರವೇ ಈ ಅತ್ಯಾಚಾರದ ವಿಷಯ ಬೆಳಕಿಗೆ ಬಂದಿದೆ. ಆರೋಪಿ ಮೌಲಾನಾ ನೆರೆಮನೆಯವನಾಗಿದ್ದರೆ, ಬಾಲಕಿಯನ್ನು ಆಗಾಗ ಮನೆಗೆ ಕರೆದುಕೊಂಡು ಹೋಗುತ್ತಿದ್ದ. ಅತ್ಯಾಚಾರದ ವಿಷಯ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಹೀಗಾಗಿ, ಆಕೆ ಸುಮ್ಮನಿದ್ದಳು. ಫೆಬ್ರವರಿ 14 ರ ಮಧ್ಯರಾತ್ರಿ ಬಾಲಕಿಗೆ ತೀವ್ರವಾದ ಹೊಟ್ಟೆನೋವು ಕಾಣಿಸಿಕೊಂಡಿತು. ಬಳಿಕ ಆಕೆ ತನ್ನ ಮನೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಆಕೆ ಮಗುವಿಗೆ ಜನ್ಮ ನೀಡುವ ಆಕೆ ಮನೆಯವರಿಗೆ ಆಕೆ ಗರ್ಭಿಣಿಯಾಗಿದ್ದಾಳೆ ಎಂಬ ವಿಷಯವೇ ಗೊತ್ತಾಗಿರುವುದು ವಿಚಿತ್ರ. ಆಕೆ ಕೂಡ ಮೌಲಾನಾಗೆ ಹೆದರಿ ತನ್ನ ದೇಹದಲ್ಲಿ ಆಗುತ್ತಿದ್ದ ಬದಲಾವಣೆಯನ್ನು ಮನೆಯವರಿಗೆ ತಿಳಿಸಿರಲಿಲ್ಲ. ಆಕೆಯ ಕುಟುಂಬದವರು ನೀಡಿದ ದೂರಿನ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: 3 ವರ್ಷದ ಮಗುವಿನ ಮೇಲೆ ಅಪ್ಪನ ಗೆಳೆಯನಿಂದಲೇ ಅತ್ಯಾಚಾರ

ಪಿಲ್ಖುವ ಕೊಟ್ವಾಲಿ ಪ್ರದೇಶದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿ 14 ರಂದು 14 ವರ್ಷದ ಬಾಲಕಿ ಹಠಾತ್ತನೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಾಗ, ಆಕೆಯ ಕುಟುಂಬ ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿತು, ಅಲ್ಲಿ ವೈದ್ಯರು ಆಕೆ ಗರ್ಭಿಣಿ ಎಂದು ಹೇಳಿದರು. ಈ ವಿಷಯ ತಿಳಿದು ಶಾಕ್ ಆದ ಅವರು ಬೇರೆಯವರಿಗೆ ಈ ವಿಚಾರ ಗೊತ್ತಾಗಬಾರದು ಎಂದು ಆಕೆಯನ್ನು ವಾಪಾಸ್ ಮನೆಗೆ ಕರೆದುಕೊಂಡು ಬಂದರು. ಅದಾದ ಸ್ವಲ್ಪ ಸಮಯದ ನಂತರ, ಆಕೆ ಮನೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದಳು. ಬಾಲಕಿಯ ತಂದೆ ಕಾರ್ಮಿಕರಾಗಿದ್ದರೆ, ತಾಯಿ ಮನೆಯಲ್ಲೇ ಇರುತ್ತಾರೆ. ಆದರೂ ಅವರಿಗೆ ಮೌಲಾನಾ ಈ ರೀತಿ ಅತ್ಯಾಚಾರ ನಡೆಸಿದ್ದು, ಮಗಳು ಗರ್ಭಿಣಿಯಾಗಿರಲಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *