
ದಾವಣಗೆರೆ, ಏಪ್ರಿಲ್ 13: ಲೆಕ್ಕ ಕೊಡಿ ಅಭಿಯಾನ ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ವಚನಾನಂದ ಸ್ವಾಮೀಜಿಗೆ ದೊಡ್ಡ ಶಾಕ್ ಕೊಡ, ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಲಾಯಿತು. ಗುರುಪೀಠದಲ್ಲಿ ಧರ್ಮದರ್ಶಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ, ಒಟ್ಟು 15 ಜನ ಇರುವ ಧರ್ಮದರ್ಶಿ ಸಮಿತಿ ಸಭೆಯಲ್ಲಿ 12 ಜನ ಈ ನಿರ್ಧಾರಕ್ಕೆ ಸಹಮತ ಸೂಚಿಸಿದ್ದಾರೆ ಎಂದು ಧರ್ಮದರ್ಶಿ ಸಮಿತಿ ಸದಸ್ಯರಾದ ಬಸವರಾಜ್ ದಿಂಡೂರ ಹಾಗೂ ಬಾವಿ ಬೆಟ್ಟಪ್ಪ.
ಇನ್ನು ಧರ್ಮದರ್ಶಿ ಸಮಿತಿಯ ನಿರ್ಧಾರದ ಬಗ್ಗೆಸಂಸ್ಥಾಪಕ ಟ್ರಸ್ಟಿ ಎಚ್. ಪಿ. ಬಸವರಾಜ್ ಕಿಡಿ ಕಾರಿದ್ದಾರೆ. ಸಭೆಯಲ್ಲಿ ವಚನಾನಂದ ಸ್ವಾಮೀಜಿಗಳ ಮಠದ ಗುರು ಪೀಠದ ಉಚ್ಛಾಟನೆಗೆ ಸಮಿತಿ ಮುಂದಾದ ಕಾರಣ ಸಭೆಯಿಂದ ನಾನು ಹೊರಬಂದಿದ್ದೇನೆ. ಸಮಿತಿಯ ಈ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಅವರು ಹೇಳಿದರು. ಇನ್ನು ಕರೆಯುವ ಏಳು ದಿನ ಮೊದಲು ಧರ್ಮದರ್ಶಿ ಸಭೆ ಸಮಿತಿ ಸದಸ್ಯರಿಗೆ ನೋಟಿಸ್ ಕೊಡಬೇಕು. ಆದರೆ ತಡ ರಾತ್ರಿ ಬಂದು ಸ್ವಾಮೀಜಿಗಳು ಇರುವ ಮಠದ ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ. ಜೊತೆಗೆ ಸ್ವಾಮೀಜಿ ವಿರುದ್ಧ ಇರುವ ಆರೋಪ ಪಟ್ಟಿ ಕೊಡಬೇಕು. ಇದ್ಯಾವುದನ್ನೂ ಮಾಡದೆ ಧರ್ಮದರ್ಶಿ ಸಮಿತಿ ಸಭೆ ನಡೆಸಿದೆ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ: ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ! ತೀವ್ರ ಸ್ವರೂಪ ಲೆಕ್ಕ ಕೊಡಿ ಅಭಿಯಾನ
ಇಂದು ಬೆಳಿಗ್ಗೆಯಿಂದಲೇ ಪಂಚಮಸಾಲಿ ಗುರುಪೀಠದ ಧರ್ಮದರ್ಶಿ ಮಂಡಳಿ ಹಾಗೂ ಭಕ್ತರ ನಡುವಿನ ಸಂಘರ್ಷ ಹೈಡ್ರಾಮಾ ಸೃಷ್ಟಿಸಿತ್ತು. ನಂತರದ ಬಿಗುವಿನ ವಾತಾವರಣ ನಿರ್ಮಾಣವಾದ ಕಾರಣ ಯಾವುದೇ ಅಹಿತಕರ ಘಟನೆ ನಡೆಯದಂತೆ ತಹಶೀಲ್ದಾರ್ ಸಂತೋಷ್ ಕುಮಾರ್ ನಿಷೇಧಿಸಲಾಗಿದೆ, ಭಕ್ತರನ್ನು ಮಠದ ಗೇಟ್ ಬಳಿಯೇ ತಡೆಯಲಾಗಿದೆ. ಜೊತೆಗೆ 100ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದರು.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.