Headlines

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ


ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದರು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ. ಕಾಂಗ್ರೆಸ್ ನವರು, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ ಎಂದು ಹೇಳಿದ್ದಾರೆ. ಜೊತೆಗೆ, ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದವರು ಬೀಡುಬಿಟ್ಟ ಎಂದು ಚುನಾವಣಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಎಲ್ಲ ಯುವಕರು, ಯುವತಿಯರು, ಹಿರಿಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾರತೀಯ ಜನತಾ ಪಕ್ಷದ ಕಮಲದ ಗುರುತಿಗೆ ಮತ ಹಾಕುವಂತೆ ಮನವಿ ಮಾಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *