
ಬಟಾಲಾ, ಜೂನ್ 27: ಪಂಜಾಬ್ನ ಬಟಾಲಾ ನಗರದ ಜನನಿಬಿಡ ರಸ್ತೆಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗ್ಯಾಂಗ್ಸ್ಟರ್ ಜಗ್ಗು ಭಗವಾನ್ಪುರಿಯಾ ತಾಯಿ ಹರ್ಜಿತ್ ಕೌರ್ಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಗೊಂಡಿದ್ದ ಹೌರ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಕುಳಿತಿರುವಾಗ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಚಾಲಕ ಕರಣ್‌ವೀರ್ ಸಿಂಗ್ ಕೂಡ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದು, ಕುಖ್ಯಾತ ದೇವೇಂದ್ರ ಬಂಬಿಹಾ ಗ್ಯಾಂಗ್ ಇದರ ಹೊಣೆಯನ್ನು ಹೊತ್ತುಕೊಂಡಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ