
ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭವಾಗಲಿದೆ.
ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್ ಆಯಿತು. ಕರ್ನಾಟಕದಲ್ಲಿ ಈ ಚಿತ್ರ ಬಿಡುಗಡೆಯನ್ನೇ ಕಂಡಿಲ್ಲ. ಅದಕ್ಕೂ ಮೊದಲು ಬಂದ ‘ಪೊನ್ನಿಯೆನ್ ಸೆಲ್ವನ್’ ಹಾಗೂ ‘ಪೊನ್ನಿಯೆನ್ ಸೆಲ್ವನ್ 2’ ಸಿನಿಮಾಗಳು ತಮಿಳುನಾಡಿನಲ್ಲಿ ಮೆಚ್ಚುಗೆ ಪಡೆಯಿತು. ಈಗ ಅವರು ಗೆಲ್ಲುವ ಕನಸಿನೊಂದಿಗೆ ಹೊಸ ಚಿತ್ರ ಘೋಷಣೆ ಮಾಡಿದ್ದು ವಿಶೇಷ.
ಮಣಿರತ್ನಂ ಅವರು ಹಲವು ಅದ್ಭುತ ಚಿತ್ರಗಳನ್ನು ವೀಕ್ಷಿಸಿದ್ದಾರೆ. ಅವರು ಇತ್ತೀಚೆಗೆ ಕೊಂಚ ಚಾರ್ಮ್ ಕಳೆದುಕೊಂಡಿದ್ದಾರೆ. ಆದರೆ, ಈ ಹೊಸ ಸಿನಿಮಾ ಮೂಲಕ ಅವರಿಗೆ ಗೆಲುವು ಸಿಗುವ ನಿರೀಕ್ಷೆ ಇದೆ.
‘ಮದ್ರಾಸ್ ಟಾಕೀಸ್’ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಸಂಸ್ಥೆಯ 23ನೇ ಸಿನಿಮಾ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಶೂಟಿಂಗ್ ಅಲ್ಲಿ ಬ್ಯುಸಿ ಇದ್ದು, ಶೀಘ್ರವೇ ಬರಲಿದ್ದಾರೆ. ವಿಜಯ್ ಸೇತುಪತಿ ಅವರು ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ವಿಜಯ್ ಹಾಗೂ ಮಣಿರತ್ನಂ ಅವರು ‘ಚೆಕ್ಕ ಚಿವಂತ ವಾನಂ’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.
ಇದನ್ನೂ ಓದಿ: ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?
ಸಾಯಿ ಪಲ್ಲವಿ ಅವರನ್ನು ಮಣಿರತ್ನಂ ಅವರು ಈ ಮೊದಲು ಹೊಗಳಿದ್ದರು. ಸಾಯಿ ಪಲ್ಲವಿ ಜೊತೆ ಸಿನಿಮಾ ಮಾಡುತ್ತೇನೆ ಎಂದು ಮಣಿರತ್ನಂ ಹೇಳಿದ್ದರು. ಈಗ ಅವರು ಕೊಟ್ಟ ಮಾತನ್ನು ಉಳಿಸಿದ್ದಾರೆ. ಸಾಯಿ ಪಲ್ಲವಿ ಅದ್ಭುತ ನಟಿ. ಅವರು ಅತ್ಯುತ್ತಮ ನಿರ್ದೇಶಕರ ಜೊತೆ ಸೇರುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಹೆಚ್ಚುತ್ತದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.