ಮನೆಗಳಿಗೆ ಬೀಗ, ನಾವುಗಳಿಗೆ ಖಾಲಿ ಖಾಲಿಚಿತ್ರ ಕ್ರೆಡಿಟ್ ಮೂಲ: ಟಿವಿ9 ಕನ್ನಡ
ಹುಬ್ಬಳ್ಳಿ, ಫೆಬ್ರವರಿ 17: ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದಲ್ಲಿ ನೋಡಿ ಎಲ್ಲಿದ್ರೂ ಜನರು ಹೆಂಡತಿ ಮಕ್ಕಳನ್ನು ಕರೆದುಕೊಂಡು ಮನೆ ತೊರೆಯುತ್ತಿರುವ ದೃಶ್ಯಗಳು ಬರ್ತಿವೆ. ಅಷ್ಟಕ್ಕೂ ಇರುವಿಗೇನು ಯಾವುದೇ ಸಾಂಕ್ರಾಮಿಕ ರೋಗ ಲಗ್ಗೆ ಇಟ್ಟಿಲ್ಲ. ಹೀಗಿದ್ದರೂ ಪಟ್ಟಣಕ್ಕೆ ಪಟ್ಟಣವೇ ಬಂದ್ ಆಗಿದೆ. ಇದಕ್ಕೆ ಕಾರಣ ದೇವಿಯ ಜಾತ್ರೆ. ಹೌದು, ದೇವಿ ಜಾತ್ರೆ ನಡೆಯಬೇಕಾದ್ರೆ ಐದು ದಿನ ಜನರು ಮನೆ ಖಾಲಿ ಮಾಡಬೇಕು. ಹಿಂದೂಗಳು ಇದೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿ ಸರ್ವ ಧರ್ಮದವರು ಇಂತಹದೊಂದು ಆಚರಣೆಯನ್ನು ಪಾಲಿಸಬೇಕು.
ಕಲಘಟಗಿಯ ಗ್ರಾಮದೇವಿ ಜಾತ್ರೆ ಉತ್ತರ ಕರ್ನಾಟಕದ ಅತಿದೊಡ್ಡ ಜಾತ್ರೆಗಳಲ್ಲಿ ಒಂದು. ರಾಜ್ಯ ಮತ್ತು ಹೊರರಾಜ್ಯಗಳಿಂದ ಜನರು ಇಲ್ಲಿಗೆ ಭೇಟಿ ಮತ್ತು ಜಾತ್ರೆಯ ವೈಭವಕ್ಕೆ ಸಾಕ್ಷಿಯಾಗುತ್ತಾರೆ. ಮೂರು ವರ್ಷಗಳಿಗೊಮ್ಮೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಗ್ರಾಮದೇವಿಯ ಜಾತ್ರೆ ವಿಜೃಂಭಣೆಯಿಂದ ನಡೆಯುತ್ತೆ. ಈ ಬಾರಿ ಇದೇ ಫೆಬ್ರವರಿ 25 ರಿಂದ ಪ್ರಾರಂಭವಾಗಲಿದೆ. ಜಾತ್ರೆ ಹಿನ್ನೆಲೆ ಕಲಘಟಗಿ ಸೇರಿದಂತೆ ಸುತ್ತಲಿನ ಐದು ಹಳ್ಳಿಗಳ ಜನರು ವಿಶಿಷ್ಟವಾದ ಪದ್ಧತಿಯನ್ನು ಆಚರಿಸುತ್ತಾರೆ. ಸಾವಿರಾರು ಜನರ ಕುಟುಂಬ ಸಮೇತ ತಮ್ಮ ಮನೆಗಳಿಗೆ ಬೀಗ ಹಾಕಿ ಪಟ್ಟಣದಿಂದ ಹೊರ ಹೋಗುತ್ತಾರೆ. ಕಲಘಟಗಿ, ದಾಸ್ತಿಕೊಪ್ಪ ಕಲಕುಂಡಿ, ಬೆಂಡಿಗೇರಿ, ಮಾಚಾಪುರ ಗ್ರಾಮಗಳಲ್ಲಿ ಹೊರವಾರ ಪದ್ಧತಿಯನ್ನು ಆಚರಿಸುತ್ತಾರೆ. ಈ ಐದು ಹಳ್ಳಿ ಬರುವ ಯುಗಾದಿಯ ತನಕ ಮದುವೆ, ನಿಶ್ಚಿತಾರ್ಥ, ನಾಮಕರಣಗಳು ಸೇರಿದಂತೆ ಯಾವುದೇ ಶುಭ ಕಾರ್ಯಗಳೂ ಇವೆ. ಈ ವರ್ಷದ ಹೋಳಿ ಹುಣ್ಣಿಮೆಯಂದು ಬಣ್ಣದೋಕುಳಿಯನ್ನು ಸಹ ಆಚರಿಸುವುದಿಲ್ಲ. ಜನರು ಮೂರು ಮಂಗಳವಾರ, ಎರಡು ಶುಕ್ರವಾರ ಸೇರಿ ಐದು ದಿನಗಳ ಕಾಲ ಮನೆಗಳನ್ನು ಖಾಲಿ ಮಾಡುತ್ತಾರೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಮನೆಯಿಂದ ದೂರವಿರುತ್ತದೆ. ಜಾತ್ರೆಗೆ ಮೊದಲು ಐದು ವಾರಗಳ ಆಚರಣೆ ನಡೆಯುತ್ತೆ.
ಇದನ್ನೂ ಓದಿ: ಹುಬ್ಬಳ್ಳಿಯ ಸಿದ್ದಾರೂಢ ಮಹಾರಥೋತ್ಸವದಲ್ಲಿ ಭಕ್ತ ಸಾಗರ; ಎಷ್ಟು ನೋಡಿದ್ರೂ ಜನವೋ ಜನ
ಇನ್ನು ಮನೆ ಬಿಟ್ಟು ತೆರಳುವ ಜನರ ಉದ್ಯಾನ, ಗದ್ದೆಗಳಲ್ಲಿ ಮತ್ತು ಪಟ್ಟಣದ ಹೊರಗಿನ ಮರಗಳ ಕೆಳಗೆ ದಿನ ಕಳೆಯುತ್ತಾರೆ. ಆಹಾರದ ಬುತ್ತಿಗಳನ್ನು ಕಟ್ಟಿಕೊಂಡು ಒಟ್ಟಾಗಿ ಊಟ ಮಾಡುತ್ತಾರೆ. ಈ ಐದು ದಿನ ಅಂಗಡಿ- ಮುಂಗಟ್ಟು ಮುಚ್ಚಿರುತ್ತೆ. ವ್ಯಾಪಾರ ವಹಿವಾಟು ಸ್ಥಗಿತಗೊಳ್ಳುತ್ತದೆ. ಗ್ರಾಮದೇವಿ ಈ ಸಂದರ್ಭದಲ್ಲಿ ಸಂಚರಿಸುತ್ತಾಳೆ. ಅವಳು ದುಷ್ಟ ಶಕ್ತಿಗಳನ್ನು ಕೊಲ್ಲುತ್ತಾಳೆ ಎಂಬುದು ಜನರ ನಂಬಿಕೆ. ಹೊರವಾರ ಆಚರಣೆ ಮಾಡೋ ದಿನದಲ್ಲಿ ಮುಂಜಾನೆ ಹತ್ತು ಗಂಟೆಗೆ ಮನೆಯ ಹೊರಗೆ ಒಂದು ಚೊಂಬು ನೀರು ತುಂಬಿ ಇಟ್ಟು ಬರೋ ಜನರು, ಸಂಜೆ ಮನೆಗೆ ಹೋಗಿ ನೀರನ್ನು ಪೂಜೆ ಮಾಡಿ ಮನೆಗೆ ಇಡ್ತಾರೆ. ಜಾತ್ರೆ ಸಮಯದಲ್ಲಿ ಒಟ್ಟು ಐದು ದಿನಗಳ ಕಾಲ ಇಂತಹದೊಂದು ಸಂಪ್ರದಾಯವನ್ನು ನೂರಾರು ವರ್ಷಗಳಿಂದ ಆಚರಣೆ ಮಾಡಿಕೊಂಡು ಬರಲಾಗ್ತಿದೆ. ಹೊರವಾರದ ದಿನ ಮನೆಯಲ್ಲಿದ್ದರೆ ಕೆಡಕಾಗುತ್ತೆ ಅನ್ನೋ ನಂಬಿಕೆ ಜನರಲ್ಲಿದ್ದು, ಹೀಗಾಗಿ ಎಲ್ಲಾ ಧರ್ಮೀಯರು ಇಂತಹದೊಂದು ಆಚರಣೆಯನ್ನು ಕಟ್ಟುನಿಟ್ಟಾಗಿ ಮಾಡುತ್ತಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.