
ಆಂಧ್ರಪ್ರದೇಶ, ಮಾರ್ಚ್ 05: ಬುದ್ಧಿ ಹೇಳಿ ಪಾಠ ಕಲಿಸಬಾರದು, ಈಗಿನ ಮಕ್ಕಳು ಶಿಕ್ಷಕರ ಮೇಲೆ ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗುತ್ತಿದ್ದಾರೆ ಎನ್ನುವುದೇ ಆತಂಕದ ಸಂಗತಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ವೀರವಳ್ಳಿಯ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಕ್ಷಕರು ಬೈದರೆಂದು ಅವರ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಶಿಕ್ಷಕರು ಮಾರ್ಗದರ್ಶನ ನೀಡುತ್ತಾರೆ, ಮಕ್ಕಳ ಭವಿಷ್ಯವನ್ನು ರೂಪಿಸುತ್ತಾರೆ. ಆದರೆ ಅವರ ಬೆಲೆ ಗೊತ್ತಿಲ್ಲದ ವಿದ್ಯಾರ್ಥಿಗಳು ಇಂಥಾ ತಪ್ಪು ಮಾಡಿಬಿಡುತ್ತಾರೆ.
ಇಂತಹ ನಡವಳಿಕೆಯು ಕಲಿಕಾ ವಾತಾವರಣವನ್ನು ಹಾನಿಗೊಳಿಸುವುದಲ್ಲದೆ ಸಮಾಜಕ್ಕೆ ಅಪಾಯಕಾರಿ ಸಂದೇಶವನ್ನು ರವಾನಿಸುತ್ತದೆ.ವಿದ್ಯಾರ್ಥಿಗಳು ಅಧ್ಯಯನದ ಮೇಲೆ ಕೇಂದ್ರೀಕರಿಸಿ ಮತ್ತು ಉತ್ತಮ ಭವಿಷ್ಯವನ್ನು ನಿರ್ಮಿಸಬೇಕಾದ ವಯಸ್ಸಿನಲ್ಲಿ, ವ್ಯಸನ ಮತ್ತು ಹಿಂಸಾತ್ಮಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದು ತೀವ್ರ ಕಳವಳಕಾರಿಯಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ