
ಕೋಲಾರ, ಮಾರ್ಚ್ 30: ಕೋಲಾರ ಜಿಲ್ಲೆಯ ದೊಡ್ಡಹಸಾಳ ಗ್ರಾಮದ ಬಳಿ ಹಾವೊಂದು ಮತ್ತೊಂದು ಭಾರಿ ಗಾತ್ರದ ಹಾವನ್ನೇ ನುಂಗಲು ಯತ್ನಿಸಿದ ಅಪರೂಪದ ಘಟನೆ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಉರಗ ರಕ್ಷಕ ನಾಗರಾಜ್, ಅತ್ಯಂತ ಜಾಣ್ಮೆಯಿಂದ ಕಾರ್ಯಾಚರಣೆ ಸ್ಥಳ. ಮತ್ತೊಂದು ಹಾವಿನ ಬಾಯಿಗೆ ಆಹಾರವಾಗುತ್ತಿದ್ದ ಹಾವನ್ನು ಸುರಕ್ಷಿತವಾಗಿ ಬಿಡಿಸುವಲ್ಲಿ ನಾಗರಾಜ್ ಯಶಸ್ವಿಯಾಗಿದ್ದಾರೆ. ಉರಗ ರಕ್ಷಕನ ಈ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ