Headlines

ಸಭಾಪತಿ ಸ್ಥಾನಕ್ಕೆ ಧಕ್ಕೆ ಬರ್ತಿದೆ ಎಂದು UT ಖಾದರ್​ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಟಾಂಗ್

ಸಭಾಪತಿ ಸ್ಥಾನಕ್ಕೆ ಧಕ್ಕೆ ಬರ್ತಿದೆ ಎಂದು UT ಖಾದರ್​ಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಟಾಂಗ್


ಬೆಂಗಳೂರು, ಅಕ್ಟೋಬರ್ 31: ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ವಿರುದ್ಧವೇ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಸಂಗ್ರಹಣೆ ಉಪಕರಣಗಳ ಖರೀದಿ ಹಾಗೂ 4.5 ಕೋಟಿ ರೂ. ಪುಸ್ತಕ ಮೇಳದ ವೆಚ್ಚದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಎದುರಿಸುತ್ತಿರುವಾಗಲೇ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಸ್ತುತ ಸಭಾಪತಿ ಯು.ಟಿ. ಖಾದರ್ ವಿರುದ್ಧ ಭ್ರಷ್ಟಾಚಾರದ ಆರೋಪಗಳಿಗೆ ತೀವ್ರ ನಿಲುವು ವ್ಯಕ್ತಪಡಿಸಿದ್ದಾರೆ.

ಆಡಳಿತ ಸುಧಾರಣೆಯ ನೆಪದಲ್ಲಿ ನಡೆದಿದೆ ಎನ್ನಲಾದ ಹಲವು ಭ್ರಷ್ಟಾಚಾರ ಹಗರಣಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ, ಇವುಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಸಂವಿಧಾನಬದ್ಧವಾದ ಸಭಾಪತಿ ಸ್ಥಾನದ ಘನತೆ ಮತ್ತು ಗೌರವಕ್ಕೆ ಕುಂದುಂಟಾಗಿದೆ ಎಂದು ಕಾಗೇರಿ ಅಭಿಪ್ರಾಯಪಟ್ಟಿದ್ದಾರೆ. ಈ ಪರಿಸ್ಥಿತಿಯಿಂದ ಹೊರಬರಲು, ಹಾಲಿ ನ್ಯಾಯಾಧೀಶರಿಂದ ಸಂಪೂರ್ಣ ತನಿಖೆಯಾಗಬೇಕು ಎಂದು ಅವರು ಒತ್ತಿ ಹೇಳಿದರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *