
ಹುಬ್ಬಳ್ಳಿ/ರಾಯಚೂರು, ಮಾರ್ಚ್ 31: ಆರಂಭದಿಂದಲೇ ಕರ್ನಾಟಕದ ಹಲವೆಡೆ ನೀರಿನ ಸಮಸ್ಯೆ ತಲೆದೋರಿದ್ದು, ಹುಬ್ಬಳ್ಳಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಹುಬ್ಬಳ್ಳಿಯ ಕಿಲ್ಲೆ ವಾರ್ಡ್‌ನಲ್ಲಿ ವಾರಕ್ಕೊಮ್ಮೆ ಮಾತ್ರ ಕುಡಿಯುವ ನೀರು ಪೂರೈಕೆಯಾಗುತ್ತಿದೆ, ಸ್ಥಳೀಯರು ಪ್ರತಿದಿನವೂ ನೀರಿಗಾಗಿ ಪರದಾಡುತ್ತಿದ್ದಾರೆ. ಹೀಗಾಗಿ ರಸ್ತೆ ತಡೆದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿರುವ ಪ್ರಸಂಗ ನಡೆದಿದೆ. ಅತ್ತ ರಾಯಚೂರು ಜಿಲ್ಲೆಯ ಹಲವು ಭಾಗಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡ ಹಿನ್ನೆಲೆ, ಜಿಲ್ಲಾಧಿಕಾರಿಗಳು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನೀರಿನ ಸಮಸ್ಯೆ ಶೀಘ್ರವಾಗಿ ಪರಿಹರಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. 150ಕ್ಕೂ ಹೆಚ್ಚು ಕೆರೆಗಳನ್ನು ಭರ್ತಿ ಮಾಡುವಂತೆ ಸೂಚಿಸಿದೆ, ಈ ಕಾರ್ಯವನ್ನು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಠಿಣ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.