ಬೆಂಗಳೂರು: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್ ಅರೆಸ್ಟ್

ಬೆಂಗಳೂರು: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ್ದ ಡೆಲಿವರಿ ಬಾಯ್ ಅರೆಸ್ಟ್


ಬೆಂಗಳೂರು, (ಜನವರಿ 09): ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದವನನ್ನು ಬೆಂಗಳೂರಿನ (ಬೆಂಗಳೂರು) ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ (ಪಶ್ಚಿಮ ಬಂಗಾಳ) ಮೂಲದ ಆರೋಪಿ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ.

ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಪ್ರತಿರೋಧಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ. ಬಳಿ ಯುವತಿ ಕಿರುಚಾಡಿದಾಗ ಕಾಮುಕ ಮುನಿರುದ್ದೀನ್ ಖಾನ್ ಅಲ್ಲಿಂದ ಪರಾರಿಯಾಗಿದ್ದ.

ಇದನ್ನೂ ಓದಿ: 14 ವರ್ಷದ ಬಾಲಕಿ ಮೇಲೆ ಚಲಿಸುವ ಕಾರಿನೊಳಗೆ ಯೂಟ್ಯೂಬರ್, ಪೊಲೀಸ್ ಸೇರಿ ಅತ್ಯಾಚಾರ

ಘಟನೆ ಬಳಿಕ ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಚರಣೆ ನಡೆಸಿ ಮುನಿರುದ್ದೀನ್ ಖಾನ್ ಅವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *