
ಬೆಂಗಳೂರು, ಏಪ್ರಿಲ್ 03: ಸುಮಾರು 5 ವರ್ಷಗಳ ಹಿಂದೆ ಐಎಸ್‌ಎಸ್ ಅಧಿಕಾರಿ ರೋಹಿಣಿ ಸಿಂಧೂರಿ (ರೋಹಿಣಿ ಸಿಂಧೂರಿ) ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ತುತ್ತಾಗಿದ್ದರು. ಈ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ಮಹಾತ್ವದ ಆದೇಶ ಹೊರಡಿಸಿದೆ. ದೂರುದಾರ ವಕೀಲ, ರವಿಚಂದ್ರೇಗೌಡರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಇಂದು (ಏ 01) ಈ ಅರ್ಜಿ ವಿಚಾರಣೆ ನಡೆಸಿದಾಗ, ತನಿಖೆಗೆ ಅನುಮತಿ ನಿರಾಕರಿಸಿದ ಸರ್ಕಾರದ ಕ್ರಮವನ್ನು ರದ್ದುಪಡಿಸಲಾಗಿದೆ. ಇಂತಹ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದ ಬಟ್ಟೆ ಬ್ಯಾಗ್ ಖರೀದಿ ಅಕ್ರಮ ಆರೋಪದ ಹಿನ್ನೆಲೆ ಏನು ಬಗ್ಗೆ ಮಾಹಿತಿ ಇಲ್ಲಿದೆ.
ಸರ್ಕಾರದ ಖಜಾನೆ ಖಾಲಿ ಮಾಡಿದ ಆರೋಪ
2021ರಲ್ಲಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ, ಪ್ಲಾಸ್ಟಿಕ್ ಮುಕ್ತ ಅಭಿಯಾನದ ಭಾಗವಾಗಿ ಮೈಸೂರು ಮಹಾನಗರ ಪಾಲಿಕೆ ಮತ್ತು ಇತರ ಸ್ಥಳೀಯ ಸಂಸ್ಥೆಗಳಿಗೆ ವಿತರಿಸಲು ಸುಮಾರು 14 ಕೋಟಿ 71 ಲಕ್ಷ ರೂ. ಮೌಲ್ಯದ ಬಟ್ಟೆ ಬ್ಯಾಗ್‌ಗಳನ್ನು ಖರೀದಿಸಲು ರೋಹಿಣಿ ಸಿಂಧೂರಿ ಅನುಮೋದನೆ ನೀಡಿದ್ದರು. ಒಂದು ಬ್ಯಾಗ್ನ ಬೆಲೆ ಸುಮಾರು 13 ರೂ. ಆದಾಗ್ಯೂ, ನಿಯಮಗಳು ಮೀರಿ ಪ್ರತಿ ಬ್ಯಾಗ್‌ಗೆ 52 ರೂ.ನಂತೆ (ಜಿಎಸ್‌ಟಿ ಸೇರಿ) ಖರೀದಿಸಲಾಗಿದೆ ಎಂದು ಅವರ ಮೇಲೆ ಆರೋಪ ಮಾಡಲಾಗಿದೆ. ಈ ದುಬಾರಿ ಖರೀದಿಯಿಂದಾಗಿ ಸರ್ಕಾರದ ಖಜಾನೆಗೆ ಸುಮಾರು 5.88 ಕೋಟಿಯಿಂದ 7.65 ಕೋಟಿ ರೂ.ವರೆಗೆ ನಷ್ಟವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ರವಿಚಂದ್ರ ಗೌಡ ದೂರು ದಾಖಲಿಸಿದ್ದಾರೆ.
ಹೈ ಕೋರ್ಟ್ ಹೇಳಿದ್ದೇನು?
ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪಾರದರ್ಶಕತೆ (KTPP) ಕಾಯ್ದೆಯನ್ನು ಉಲ್ಲಂಘಿಸಿ ಖರೀದಿ ಮಾಡಲಾಗಿದೆ ಎಂದು ಪ್ರಾಥಮಿಕ ವರದಿಯಲ್ಲಿ ನಮೂದಿಸಲಾಗಿದೆ. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ (KHDC) ಮೂಲಕ ಈ ಬ್ಯಾಗ್‌ಗಳನ್ನು ಪಡೆಯಲು 4(H) ವಿನಾಯಿತಿ ನೀಡಲಾಗಿದೆ ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಆರೋಪಿಸಿದ್ದರು. ಈ ಹಿಂದೆ ರಾಜ್ಯ ಸರ್ಕಾರವು ಇಲಾಖಾ ವಿಚಾರಣೆಯಲ್ಲಿ ರೋಹಿಣಿ ಸಿಂಧೂರಿ ಅವರಿಗೆ ಕ್ಲೀನ್ ಚಿಟ್ ನೀಡಿ, ಕ್ರಿಮಿನಲ್ ತನಿಖೆಗೆ ನಿರಾಕರಿಸಲಾಗಿದೆ.
ಇದನ್ನೂ ಓದಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ
ಆದರೆ ಈ ಆದೇಶವನ್ನು ರದ್ದುಗೊಳಿಸಿ, ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸಲಾಗಿದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.