Headlines

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ? | Why Australia Bangladesh Afghanistan Have No T20is Before The 2026 T20 World Cup

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಆಸೀಸ್‌, ಆಫ್ಘನ್‌ಗೆ ಟಿ20 ಪಂದ್ಯಗಳೇ ಇಲ್ಲ! ಯಾಕೆ? | Why Australia Bangladesh Afghanistan Have No T20is Before The 2026 T20 World Cup


18

ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಭರ್ಜರಿ ತಯಾರಿ

Image Credit : Getty

ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಭರ್ಜರಿ ತಯಾರಿ

2026ರ ಟಿ20 ವಿಶ್ವಕಪ್ ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲಾ ತಂಡಗಳು ಸಿದ್ಧತೆ ಆರಂಭಿಸಿದೆ.

28

ಭಾರತಕ್ಕಿದೆ 9 ಮ್ಯಾಚ್

Image Credit : X/BCCI

ಭಾರತಕ್ಕಿದೆ 9 ಮ್ಯಾಚ್

ಐಸಿಸಿ ಟಿ20 ವಿಶ್ವಕಪ್‌ಗೂ ಮುನ್ನ ಭಾರತ ತಂಡ ಒಟ್ಟು 9 ಪಂದ್ಯಗಳನ್ನಾಡಲಿವೆ. ಇದರಲ್ಲಿ ಗುರುವಾರದ ದ.ಆಫ್ರಿಕಾ ವಿರುದ್ಧ 2ನೇ ಟಿ20 ಪಂದ್ಯವೂ ಸೇರಿದೆ.

38

ಆಸ್ಟ್ರೇಲಿಯಾ, ಬಾಂಗ್ಲಾದೇಶ, ಅಫ್ಘಾನಿಸ್ತಾನಕ್ಕೆ ಯಾವುದೇ ಮ್ಯಾಚ್ ಇಲ್ಲ

Image Credit : Getty

ಆಸ್ಟ್ರೇಲಿಯಾ, ಬಾಂಗ್ಲಾದೇಶ, ಅಫ್ಘಾನಿಸ್ತಾನಕ್ಕೆ ಯಾವುದೇ ಮ್ಯಾಚ್ ಇಲ್ಲ

ಆದರೆ ಮಾಜಿ ಚಾಂಪಿಯನ್‌ ಆಸ್ಟ್ರೇಲಿಯಾ, ನೆರೆಯ ಬಾಂಗ್ಲಾದೇಶ, ಅಫ್ಘಾನಿಸ್ತಾನಕ್ಕೆ ಟಿ20 ವಿಶ್ವಕಪ್‌ಗೂ ಮುನ್ನ ಯಾವುದೇ ಟಿ20 ಪಂದ್ಯಗಳಿಲ್ಲ. ಇದು ಅಚ್ಚರಿ ಎನಿಸಿದ್ರೂ ಸತ್ಯ

48

ಆ್ಯಶಸ್‌ ಟೆಸ್ಟ್‌ ಸರಣಿ ಬಳಿಕ ನೇರವಾಗಿ ಟಿ20 ವಿಶ್ವಕಪ್‌ಗೆ ಕಾಂಗರೂ ಪಡೆ ಎಂಟ್ರಿ

Image Credit : Getty

ಆ್ಯಶಸ್‌ ಟೆಸ್ಟ್‌ ಸರಣಿ ಬಳಿಕ ನೇರವಾಗಿ ಟಿ20 ವಿಶ್ವಕಪ್‌ಗೆ ಕಾಂಗರೂ ಪಡೆ ಎಂಟ್ರಿ

ಮುಂಬರುವ ಜನವರಿ 08ರ ವರೆಗೆ ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆಡಲಿರುವ ಆಸೀಸ್‌, ಬಳಿಕ ನೇರವಾಗಿ ಟಿ20 ವಿಶ್ವಕಪ್‌ಗೆ ಪ್ರವೇಶಿಸಲಿದೆ.

58

ಇಂಗ್ಲೆಂಡ್ 3 ಪಂದ್ಯಗಳ ಟಿ20 ಸರಣಿ ಆಡಲಿದೆ

Image Credit : X

ಇಂಗ್ಲೆಂಡ್ 3 ಪಂದ್ಯಗಳ ಟಿ20 ಸರಣಿ ಆಡಲಿದೆ

ಆದರೆ ಎರಡು ಬಾರಿಯ ಟಿ20 ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್‌ ತಂಡವು, ಆ್ಯಶಸ್‌ ಟೆಸ್ಟ್‌ ಸರಣಿ ಮುಗಿಸಿದ ಬೆನ್ನಲ್ಲೇ ಶ್ರೀಲಂಕಾ ವಿರುದ್ಧ 3 ಏಕದಿನ, 3 ಟಿ20 ಪಂದ್ಯಗಳನ್ನಾಡಲಿದೆ.

68

ಭಾರತ ಎದುರು ಕಿವೀಸ್‌ಗೆ 5 ಮ್ಯಾಚ್ ಇವೆ

Image Credit : Getty

ಭಾರತ ಎದುರು ಕಿವೀಸ್‌ಗೆ 5 ಮ್ಯಾಚ್ ಇವೆ

ಉಳಿದಂತೆ ನ್ಯೂಜಿಲೆಂಡ್‌ 5 ಟಿ20(ಭಾರತ ವಿರುದ್ಧ), ಪಾಕಿಸ್ತಾನ 3, ದಕ್ಷಿಣ ಆಫ್ರಿಕಾ 7, ಶ್ರೀಲಂಕಾ 6, ವೆಸ್ಟ್‌ಇಂಡೀಸ್‌ 3 ಟಿ20 ಪಂದ್ಯಗಳನ್ನಾಡಲಿದೆ.

78

20 ತಂಡಗಳು ಪ್ರಶಸ್ತಿಗಾಗಿ ಕಾದಾಟ

Image Credit : Getty

20 ತಂಡಗಳು ಪ್ರಶಸ್ತಿಗಾಗಿ ಕಾದಾಟ

2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಜಂಟಿ ಆತಿಥ್ಯ ವಹಿಸಿದ್ದು, ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಸೇರಿದಂತೆ 20 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.

88

2026ರ ಫೆಬ್ರವರಿ 07ರಂದು ಟೂರ್ನಿಗೆ ಅಧಿಕೃತ ಚಾಲನೆ

Image Credit : Getty

2026ರ ಫೆಬ್ರವರಿ 07ರಂದು ಟೂರ್ನಿಗೆ ಅಧಿಕೃತ ಚಾಲನೆ

ಮುಂಬರುವ 2026ರ ಫೆಬ್ರವರಿ 07ರಂದು ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 08ಕ್ಕೆ ನಿಗದಿಯಾಗಿದೆ. ಭಾರತ ತಂಡವು ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಬದ್ದ ಎದುರಾಳಿ ಪಾಕಿಸ್ತಾನ ಎದುರು ಫೆಬ್ರವರಿ 15ರಂದು ಕೊಲಂಬೋದ ಆರ್‌ ಪ್ರೇಮದಾಸ ಮೈದಾನದಲ್ಲಿ ಕಾದಾಡಲಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.



Source link

Leave a Reply

Your email address will not be published. Required fields are marked *