ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಲಿ

ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನ: ಹೆಣ್ಣಿನ ಮೇಲಿನ ದೌರ್ಜನ್ಯ ನಿಲ್ಲಲಿ


ಮಹಿಳಾ ದೌರ್ಜನ್ಯ ವಿರೋಧಿ ದಿನಚಿತ್ರ ಕ್ರೆಡಿಟ್ ಮೂಲ: vecteezy

ಹೆಣ್ಣನ್ನು ಪೂಜಿಸುವ ನಾಡು ನಮ್ಮದು. ವಿಪರ್ಯಾಸ ಏನಂದ್ರೆ ಹೆಣ್ಣನ್ನು ಪೂಜಿಸುವ ನಾಡಿನಲ್ಲಿ ಹೆಣ್ಣಿನ ಮೇಲೆ ಪ್ರತಿನಿತ್ಯ ಒಂದಲ್ಲಾ ಒಂದು ದೌರ್ಜನ್ಯ ನಡೆಯುತ್ತಲೇ ಇರುತ್ತದೆ. ಜಗತ್ತಿನಾದ್ಯಂತ ಎಷ್ಟೋ ಮಹಿಳೆಯರು (ಮಹಿಳೆಯರು) ಹಿಂಸೆಗೆ ಬಲಿಯಾಗುತ್ತಿದ್ದಾರೆ. ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಇನ್ನೂ ನಿಂತಿಲ್ಲ. ಮಹಿಳೆಯರ ಮೇಲಾಗುತ್ತಿರುವ ಈ ದೌರ್ಜನ್ಯವನ್ನು ನಿಲ್ಲಿಸಲು, ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ನವೆಂಬರ್ 25 ರಂದು ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸುವುದಿಲ್ಲ.

ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನದ ಇತಿಹಾಸವೇನು?

1960 ನವೆಂಬರ್ 25 ರಲ್ಲಿ ಮೂವರು ಸಹೋದರಿಯರಾದ ಪ್ಯಾಟ್ರಿಯಾ ಮರ್ಸಿಡಿಸ್ ಮೆರಾಬೆಲ್, ಮರಿಯಾ ಅರ್ಜೆಂಟೀನಾ ಮಿನಾರ್ವಾ ಮೆರಾಬೆಲ್ ಮತ್ತು ಆಂಟೋನಿಯಾ ಮಾರಿಯಾ ತೆರೇಸಾ ಮೆರಾಬೆಲ್ ಅವರ ಡೊಮಿನಿಕನ್ ರಿಪಬ್ಲಿಕ್ ಆಡಳಿತಗಾರ ರಾಫೆಲ್ ಟ್ರುಜೆಲ್ಲೊನ ಆದೇಶದ ಆದೇಶದ ಕ್ರೂರವಾಗಿ ಕೊಲ್ಲಲಾಯಿತು. ಏಕೆಂದರೆ ಆ ಮೂವರು ಸಹೋದರಿಯರು ಈತನ ಸರ್ವಾಧಿಕಾರವನ್ನು ವಿರೋಧಿಸಿದ್ದರು. ಈ ಮೂವರು ದಿಟ್ಟ ಮಹಿಳೆಯರನ್ನು ಸ್ಮರಿಸುವ ಸಲುವಾಗಿ 1981 ರಲ್ಲಿ ಲ್ಯಾಟಿನ್ ಅಮೆರಿಕ ಮತ್ತು ಕೆರೆಬಿಯನ್ ಸ್ತ್ರೀವಾದಿ ಕಾರ್ಯಕರ್ತರು ಈ ದಿನವನ್ನು ಆಚರಿಸಲು ನಿರ್ಧರಿಸಿದರು.ನಂತರ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಮಾಣ ತೀವ್ರವಾಗಿ ಹೆಚ್ಚಾದ ಕಾರಣ 1999 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಪ್ರತಿ ವರ್ಷ ನವೆಂಬರ್ 25 ರಂದು ಅಂತರರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನವನ್ನು ಆಚರಿಸಲಾಗುತ್ತದೆ ಎಂದು ಘೋಷಿಸಲಾಯಿತು.

ಇದನ್ನೂ ಓದಿ: ಗೋಡಂಬಿ ದಿನದ ಆಚರಣೆಯ ಹಿಂದಿನ ಇಂಟರೆಸ್ಟಿಂಗ್ ಕಥೆಯ ಬಗ್ಗೆ ತಿಳಿಯಿರಿ

ಅಂತಾರಾಷ್ಟ್ರೀಯ ಮಹಿಳಾ ದೌರ್ಜನ್ಯ ವಿರೋಧಿ ದಿನದ ಮಹತ್ವವೇನು?

  • ಇದು ಮಹಿಳೆಯರ ಅಸ್ತಿತ್ವ ಮತ್ತು ಸಮಾಜದಲ್ಲಿ ಅವರ ಗುರುತಿಗೆ ಸಂಬಂಧಿಸಿದ ದಿನವಾಗಿದೆ.
  • ಮಹಿಳೆಯರ ಮೇಲಾಗುವ ದೈಹಿಕ ಮತ್ತು ಮಾನಸಿಕ ಹಿಂಸಾಚಾರಗಳನ್ನು ತಡೆಗಟ್ಟಲು ಮತ್ತು ಮಹಿಳೆಯರು ಮತ್ತು ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು, ಮುಖ್ಯವಾಗಿ ಮಹಿಳೆಯರಿಗೆ ಈ ಸಮಾಜದಲ್ಲಿ ಮುಕ್ತವಾಗಿ ಬದುಕಲು ಅವಕಾಶ ನೀಡುವ ನಿಟಿನಲ್ಲಿ ವಿಶ್ವ ಮಹಿಳಾ ದೌರ್ಜನ್ಯ ವಿರೋಧಿ ದಿನದಂದು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *