ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ: ಕೊಲೆ ಪ್ಲ್ಯಾನ್​​ ಕೇಳಿದ್ರೆ ಶಾಕ್​​ ಆಗ್ತೀರ!

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ: ಕೊಲೆ ಪ್ಲ್ಯಾನ್​​ ಕೇಳಿದ್ರೆ ಶಾಕ್​​ ಆಗ್ತೀರ!


ಕೊಲೆ ಆರೋಪಿ ಶರಣಮ್ಮ ಮತ್ತು ಕೊಲೆಯಾದ ಬಸವರಾಜು

ನೆಲಮಂಗಲ, ನವೆಂಬರ್ 28: ಮಾದನಹಳ್ಳಿ ಪೊಲೀಸ್ ಠಾಣಾನಾಯಕ ಅಪರಿಚಿತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿ, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25) ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.

ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿದ್ದ ವೀರಭದ್ರ ತಂದೆ ಬಳಿ ಈ ದಂಪತಿಗಳು ಕೆಲಸ ಮಾಡಿಕೊಂಡಿದ್ದು, ವೀರಭದ್ರ ಕೆಲಸಗಾರರನ್ನು ನೋಡಿಕೊಳ್ಳುತ್ತಿದ್ದರು. ಈ ವೇಳೆ ವೀರಭದ್ರ ಮತ್ತು ಶರಣಮ್ಮ ನಡುವೆ ಸಲುಗೆ ಬೆಳೆದಿದೆ. ಆ ಸಲುಗೆ ಅಕ್ರಮ ಸಂಬಂಧದವರೆಗೆ ಹೋಗಿದೆ. ಹೀಗಾಗಿ ನ.19ರಂದು ಮದ್ಯ ಸೇವಿಸಿ ಬಸವರಾಜು ಮಲಗಿದ್ದ ವೇಳೆ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಶರಣಮ್ಮ ಕೊಲ್ಲಿಸಿದ್ದಾಳೆ. ತಲೆ ಮೇಲೆ ಕಲ್ಲು ಎತ್ತಿಹಾಕಿ, ನಂತರ ನೇಣು ಬಿಗಿದು ಬರ್ಬರವಾಗಿ ಬಸವರಾಜು ಕೊಲೆ ಮಾಡಿದ. ಬಳಿಕ ಶವವನ್ನ ಗಂಗೊಂಡಹಳ್ಳಿ ನಿರ್ಜನ ಪ್ರದೇಶಕ್ಕೆ ಆರೋಪಿಗಳು ಸಾಗಿಸಿದ್ದು, ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನು ಕೊಂಡು, ಅವಳ ಶವವನ್ನು ಕಾರಲ್ಲೇ ಬಿಟ್ಟು ಮಲಗಿದ ಆಸಾಮಿ!

ಕೊಲೆ ಬಳಿಕ ನಾಟಕ ಮಾಡಿದ್ದ ಶರಣಮ್ಮ

ಬಸವರಾಜು ಕೊಲೆಗೆ ಒಂದು ತಿಂಗಳ ಹಿಂದೆಯೇ ಪ್ಲ್ಯಾನ್ ನಡೆದಿತ್ತು. ಸುರೇಶ್ ಮೃತದೇಹ ಸುಟ್ಟ ಮರುದಿನ ಅದೇ ಸ್ಥಳಕ್ಕೆ ಬಂದ ಆರೋಪಿಗಳು ನೋಡಿ ಹೋಗಿದ್ದರು. ಈ ವೇಳೆ ಮೃತದೇಹ ಇಲ್ಲದಿರುವುದನ್ನು ಕಂಡು ಹೋಗಲಿ ಬಿಡು ಎಂದುಕೊಂಡಿದ್ದರು. ಆ ಬಳಿಕ ಮನೆಯಲ್ಲಿ ಚೆಲ್ಲಿದ್ದ ನೆತ್ತರು ತೊಳೆದ ಶರಣಮ್ಮ, ನನ್ನ ಗಂಡ ಕಾಣೆಯಾಗಿದ್ದಾನೆ ಹುಡುಕಿಕೊಡಿ ಎಂದು ಬ್ಯಾಡರಹಳ್ಳಿ ಠಾಣೆ ಮೆಟ್ಟಿಲೇರಿದ್ದಳು. ಆದರೆ ಅಷ್ಟರಲ್ಲಾಗಲೇ ಪೊಲೀಸರಿಗೆ ಕೊಲೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಬಸವರಾಜು ಬಿಳಿ ಬಣ್ಣದ ಕಾರ್ ನಲ್ಲಿ ಆರೋಪಿಗಳು ಮೃತದೇಹ ಸಾಗಿಸಿರುವ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ಕೊಲೆಯಾಗಿದೆ. ಈ ಆಧಾರದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *