
ಹಾಸನ, ಮಾರ್ಚ್ 30: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡನೆಗಳ ಹಾವಳಿ ಮಿತಿಯಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ರೈತರು ಭಯಪಡುತ್ತಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ