ಬೆಂಗಳೂರು: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬರುವ ಐಪಿಎಲ್ ಟೂರ್ನಿಯಲ್ಲಿ ತನ್ನ ತವರು ಮೈದಾನವನ್ನಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಿಟ್ಟು ಬೇರೆ ಸ್ಟೇಡಿಯಂ ಆಯ್ಕೆ ಮಾಡುತ್ತಾ? ಇದೀಗ ಹೊಸದೊಂದು ಬೆಳವಣಿಗೆ ನಡೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಮುಂಬರುವ 2026ರ ಐಪಿಎಲ್ ಟೂರ್ನಿಯಲ್ಲಿ ಹೊಸ ತವರು ಮೈದಾನದ ಹುಡುಕಾಟದಲ್ಲಿದೆ ಎಂದು ವರದಿಯಾಗಿದೆ.

ಕಳೆದ ವರ್ಷ ನಡೆದ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಕೊನೆಯುಸಿರೆಳೆದಿದ್ದರು. ಇದಾದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಾವುದೇ ಕ್ರಿಕೆಟ್ ಚಟುವಟಿಕೆ ನಡೆದಿಲ್ಲ. ಇನ್ನು ಆರ್‌ಸಿಬಿ ಫ್ರಾಂಚೈಸಿ ಕೂಡಾ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮ್ಯಾಚ್ ನಡೆಸುವ ಕುರಿತಂತೆ ಯಾವುದೇ ಮಾತುಕತೆ ನಡೆಸಿಲ್ಲ ಎಂದು ವರದಿಯಾಗಿದೆ.

ಇತ್ತೀಚಿಗಿನ ವರದಿ ಪ್ರಕಾರ ರಾಯ್ಪುರ ಹಾಗೂ ಇಂದೋರ್ ಸ್ಟೇಡಿಯಂಗಳು ಆರ್‌ಸಿಬಿ ಪಂದ್ಯಗಳಿಗೆ ಆತಿಥ್ಯ ವಹಿಸಲು ಒಲವು ತೋರಿವೆ ಎಂದು ವರದಿಯಾಗಿದೆ.

ಇನ್ನು ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಸ್ಟೇಡಿಯಂ ಕೂಡಾ ಆರ್‌ಸಿಬಿ ತಂಡದ ಪಂದ್ಯಗಳಿಗೆ ಆಸಕ್ತಿ ತೋರಿಸಿದ್ದು, ಅಧಿಕೃತವಾಗಿಯೂ ಈ ಬಗ್ಗೆ ಟ್ವೀಟ್ ಮಾಡಿದೆ.

ಇನ್ನು ರಾಜಸ್ಥಾನ ಕ್ರಿಕೆಟ್ ಸಂಸ್ಥೆಯ ಜತೆಗಿನ ತಿಕ್ಕಾಟದಿಂದಾಗಿ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿ ಕೂಡಾ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ತಮ್ಮ ತವರು ಮೈದಾನವನ್ನಾಗಿ ಬೇರೆ ಸ್ಟೇಡಿಯಂ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಆರ್‌ಸಿಬಿ ಫ್ರಾಂಚೈಸಿಯು ತಮ್ಮ ತವರು ಮೈದಾನವನ್ನಾಗಿ ಬೇರೆ ಸ್ಟೇಡಿಯಂ ಆಯ್ಕೆ ಮಾಡಿಕೊಳ್ಳಲಿದೆಯೇ ಅಥವಾ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿಯೇ 2026ರ ಐಪಿಎಲ್ ಪಂದ್ಯಗಳು ನಡೆಯಲಿವೆಯೇ ಎನ್ನುವ ಕುತೂಹಲಕ್ಕೆ ಇನ್ನೂ ತೆರೆ ಬಿದ್ದಿಲ್ಲ.

Source link
IPL 2026: ಆರ್‌ಸಿಬಿ ತವರು ಮೈದಾನ ಬೆಂಗಳೂರಿನಿಂದ ಶಿಫ್ಟ್ ಆಗುತ್ತಾ? ಪುಣೆ ಬಳಿಕ ಮತ್ತೆ 2 ಸ್ಟೇಡಿಯಂ ಎಂಟ್ರಿ!