
ಬೆಂಗಳೂರು, (ಅಕ್ಟೋಬರ್ 26): ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು ರದ್ದುಗೊಳಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಬರೆದಿರುವ ಪತ್ರ ಬಾರೀ ವಿವಾದ ಸೃಷ್ಟಿಸಿದೆ. ಇದರ ಬೆನ್ನಲ್ಲೇ RSS ಚಟುವಟಿಕೆಯಲ್ಲಿ ಸರ್ಕಾರಿ ನೌಕರರು ಸೇರುವುದಕ್ಕೂ ಬ್ರೇಕ್ ಹಾಕಬೇಕೆಂದು ಮನವಿ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಿಯಾಂಕ್ ಖರ್ಗೆ, ಸರ್ಕಾರಿ ನೌಕರರು ಎಸ್ಎಸ್ ಚಟುವಟಿಕೆಯಲ್ಲಿ ಭಾಗವಹಿಸುತ್ತಿದ್ದಾರೆ. ಕರ್ನಾಟಕ ಸಿವಿಲ್ ಸರ್ವಿಸ್ ರೂಲ್ಸ್ ಇದೆ. ನಿನ್ನೆ, ಮೊನ್ನೆ ಕೆಲವರು ಆರ್ ಎಸ್ಎಸ್ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ನಮ್ಮ ಕೆಲವರು ಹೋಗಿದ್ದಾರೆ, ವರದಿ ಕೇಳಿದ್ದು, RSS ಕಾರ್ಯಕ್ರಮಕ್ಕೆ ಹೋದವರನ್ನು ಸಸ್ಪೆಂಡ್ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.