ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ

ಭಾರತದ ಪ್ರಧಾನಿಯನ್ನೂ ಟ್ರಂಪ್ ಕಿಡ್ನಾಪ್ ಮಾಡುತ್ತಾರಾ? ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚೌಹಾಣ್ ವಿವಾದ


ಮುಂಬೈ, ಜನವರಿ 6: ಭಾರತ-ಅಮೆರಿಕಾ ದೇಶಗಳ ನಡುವಿನ ವ್ಯಾಪಾರ ಮತ್ತು ರಾಷ್ಟ್ರೀಯ ಭದ್ರತೆಯ ಕುರಿತು ಕಾಂಗ್ರೆಸ್ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚೌಹಾಣ್ ಇಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಸ್ತಾವಿತ ಶೇ. 50ರಷ್ಟು ಸುಂಕವು ಭಾರತ-ಅಮೆರಿಕಾ ನಡುವಿನ ವ್ಯಾಪಾರವನ್ನು ವಿಶೇಷವಾಗಿ ಅಮೆರಿಕಕ್ಕೆ ಭಾರತದ ರಫ್ತುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಎಚ್ಚರಿಸಿದ ಪೃಥ್ವಿರಾಜ್ ಚೌಹಾಣ್, ವೆನೆಜುವೆಲಾವನ್ನು (ವೆನೆಜುವೆಲಾ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತದ ಪ್ರಧಾನಿಯನ್ನು ಅಪಹರಿಸುತ್ತಾರಾ? ಎಂದು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ.

ಅವರ ಈ ಹೇಳಿಕೆಗಳು ವಿವಾದವನ್ನು ಹುಟ್ಟುಹಾಕಿದೆ. ಇಂದುಗಾರರೊಂದಿಗೆ ಮಾತನಾಡಿದ ಪೃಥ್ವಿರಾಜ್ ಚೌಹಾಣ್, “ಭಾರೀ ಸುಂಕವು ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ವಹಿವಾಟು ಸಾಧ್ಯವಾಗುತ್ತಿಲ್ಲ. ಇದು ಭಾರತವು ಪರ್ಯಾಯ ರಫ್ತು ಮಾರುಕಟ್ಟೆಗಳನ್ನು ಹುಡುಕುವಂತೆ ಮಾಡುತ್ತದೆ. ಹಾಗಾದರೆ, ಮುಂದೆ ಏನು? ಎಂದು ಕೇಳಿದ್ದಾರೆ.

ಇದನ್ನೂ ಓದಿ: ವೆನೆಜುವೆಲಾದ ಮಧ್ಯಂತರ ಅಧ್ಯಕ್ಷೆ ಡೆಲ್ಸಿ ರೋಡ್ರಿಗಸ್ ಗಿದೆ ಭಾರತದ ನಂಟು; ಇವರೂ ಕೂಡ ಸಾಯಿ ಬಾಬಾ ಭಕ್ತೆ!

ವೆನೆಜುವೆಲಾದ ಅಧ್ಯಕ್ಷ ಮಡುರೋ ಮತ್ತು ಅವರ ಪತ್ನಿಯನ್ನು ಟ್ರಂಪ್ ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈ ಭಾರತದ ಪರಿಸ್ಥಿತಿಯನ್ನು ಪೃಥ್ವಿರಾಜ್ ಚೌಹಾಣ್ ವೆನೆಜುವೆಲಾದ ಜೊತೆ ಹೋಲಿಕೆ ಮಾಡಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪೃಥ್ವಿರಾಜ್ ಚೌಹಾಣ್ ವಿವಾದಕ್ಕೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಆಪರೇಷನ್ ಸಿಂಧೂರ್ ಬಗ್ಗೆ ಕೂಡ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೊದಲ ದಿನವೇ ಭಾರತ ಹಿನ್ನಡೆ ಅನುಭವಿಸಿತ್ತು ಎಂದು ಅವರು ಆರೋಪಿಸಿದ್ದರು. ಆ ಹೇಳಿಕೆಗೆ ರಕ್ಷಣಾ ತಜ್ಞರು ಮತ್ತು ಕೇಂದ್ರ ಸರ್ಕಾರದಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅದು ಭಾರತೀಯ ಸೇನೆಗೆ ಮಾಡಿದ ಅವಮಾನ ಎಂದು ಟೀಕೆಯಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *