ಬೆಂಗಳೂರು, ಡಿ. 27: ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ್ದಾರೆ. ಒಂದೇ ಬೈಕ್‌ನಲ್ಲಿ ಮೂವರು ಯುವತಿಗೆ ಕಿರುಕುಳ ನೀಡಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಮಾರು ಎರಡು ಕಿಲೋ ರಸ್ತೆಯ ಸಂಪೂರ್ಣ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವಿಡಿಯೋದಲ್ಲಿ ತೋರಿಸಿರುವ ಪ್ರಕಾರ, ಮುಂದೆ ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ಬಂದ ಮೂವರು ಒಂದೇ ಬೈಕ್‌ನಲ್ಲಿ ಫಾಲೋ ಮಾಡಿಕೊಂಡಿದ್ದಾರೆ. ಜೊತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್ ನಲ್ಲಿ ಓಡಿಸಿದ್ದಾರೆ. ಈ ಪುಂಡರು ಯುವತಿಗೆ ಕಿರುಕುಳ ನೀಡುತ್ತಿರುವುದನ್ನು ಬೈಕ್ ಹಿಂದೆ ಬರುತ್ತಿದ್ದ ಕಾರು ಚಾಲಕ ವಿಡಿಯೋ ಮಾಡಿದ್ದಾರೆ. ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡು, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಕೂಡ ನಂಬರ್ ಎಕ್ಸ್’ ಮೂಲಕವೇ ಬೈಕ್ ಪತ್ತೆ ಮಾಡಿದ್ದು, ಮೂವರ ವಿಚಾರಣೆ ಮಾಡೋದಾಗಿ ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ