
ಪುಟ್ಟ ಮಕ್ಕಳನ್ನು (ಚಿಕ್ಕ ಮಕ್ಕಳು) ನೋಡಿಕೊಳ್ಳುವಾಗ ಅವರ ಮೇಲೆ ಎಷ್ಟು ಕಣ್ಣು ಇಟ್ಟಿದ್ದರೂ ಕಡಿಮೆಯೇ. ಪುಟಾಣಿ ಮಕ್ಕಳೇ ಹಾಗೆ, ಸಿಕ್ಕ ಸಿಕ್ಕ ವಸ್ತುಗಳನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಆದ್ದರಿಂದ ಮಕ್ಕಳ ವಿಷಯದಲ್ಲಿ ಹೆತ್ತವರು ಎಷ್ಟು ಜಾಗರೂಕರಾಗಿದ್ದರೂ ಸಾಲ. ಇನ್ನು ಕೆಲವು ಹೆತ್ತವರು ಬೇಜವಾಬ್ದಾರಿತನದಿಂದ ಪುಟಾಣಿಗಳ ಸಮಸ್ಯೆಗೆ ಸಿಲುಕಿ ಕೊಳ್ಳುವುದಿದೆ. ಇದೀಗ ಇಂತಹದ್ದೇ ವಿಡಿಯೋ ವೈರಲ್ ಆಗಿದ್ದು, ಮಹಿಳೆಯೂ ಹಾಲಿನ ಬಾಟಲಿಯನ್ನು ಮಗುವಿನ ಬಾಯಿಗೆ ಇಡೋ ಬದಲು ಕಿವಿಗೆ ಇಟ್ಟಿದ್ದಾಳೆ. ಈ ದೃಶ್ಯ ನೋಡಿದ ನೆಟ್ಟಿಗರು ಈ ಮಹಿಳೆಯ ವಿರುದ್ಧ ಗರಂ ಆಗಿದ್ದಾರೆ.
dr_abhinandan_ tripathi ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬಳು ತನ್ನ ಮಡಿಲಲ್ಲಿ ಚಿಕ್ಕವಳಾಗಿದ್ದಳು, ಆರಾಮವಾಗಿ ಕುಳಿತುಕೊಂಡಿದ್ದಾಳೆ. ಬಾಟಲಿಯಿಂದ ಮಗುವಿಗೆ ಹಾಲುಣಿಸುತ್ತಿರುವುದನ್ನು ನೋಡಬಹುದು. ಆದರೆ ಇದೆ ವೇಳೆ ಈ ಮಹಿಳೆ ಎಡವಟ್ಟು ಮಾಡಿಕೊಂಡಿದ್ದಾಳೆ.
ವೈರಲ್ ವಿಡಿಯೋ ಇಲ್ಲಿದೆ
Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ
ಪುಟ್ಟ ಮಗುವಿನ ಬಾಯಿಗೆ ಹಾಲಿನ ಬಾಟಲಿ ಇಡುವುದನ್ನು ಬಿಟ್ಟು ಕಿವಿಗೆ ಇಟ್ಟಿದ್ದಾಳೆ. ಈ ಪುಟ್ಟ ಕಂದಮ್ಮನಿಗೂ ತಾಯಿ ಏನು ಮಾಡುತ್ತಾಳೆ ಎಂದು ತಿಳಿಯದೇ ಅಳಲು ಶುರು ಮಾಡಿದೆ. ಅದಲ್ಲದೇ ಮಗು ಹಸಿವಿನಿಂದ ಹಾಲಿಗಾಗಿ ಹುಡುಕಲು ಪ್ರಾರಂಭಿಸಿದೆ. ಈ ಮಹಿಳೆಯ ಸಂಪೂರ್ಣ ಗಮನವು ತನ್ನ ಮುಂಭಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಮೇಲಿದೆ.
ಇದನ್ನೂ ಓದಿ: ಪ್ರಶ್ನೆಗೆ ಉತ್ತರ ಹೇಳಂದ್ರೆ ಹೊಟ್ಟೆ ನೋವೆಂದು ಕುಂಟು ನೆಪ ಹೇಳಿದ ಪುಟಾಣಿ, ಮುಂದೇನಾಯ್ತು ನೋಡಿ
ಈ ವಿಡಿಯೋ ಅಧಿಕವಾಗಿ ವೀಕ್ಷಿಸಿದ್ದು, ಒಬ್ಬ ಬಳಕೆದಾರ ಮಗುವಿನ ಮೇಲೆ ತಾಯಿಗೆ ಅರಿವಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ತಾಯಿ ಅಂದ್ರೆ ಹೀಗೆ ಇರ್ಬೇಕು ಎಂದು ವ್ಯಂಗ್ಯವಾಡಿದ್ದಾರೆ. ಇತರರು,
ಮಗು ಮೇಲೆ ಗಮನ ಕೊಡದೇ ಆ ಕಡೆ ಏನು ನೋಡ್ತಾ ಇದ್ದಿಯಾ ಸುಂದ್ರಿ ಎಂದಳು.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ