
ಜನವರಿ, ಮಾರ್ಚ್ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಬಿಸಿ ತಟ್ಟಿದ್ದರೂ ಸಹ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್ ಇಂಡಿಯಾ ಥಿಂಕ್ಸ್ ಟುಡೆ’ಯಲ್ಲಿ ಅವರು ಮಾತನಾಡಿದರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಪ್ರಜಾಪ್ರಭುತ್ವ, ಜನಸಂಖ್ಯೆ ಮತ್ತು ವೈವಿಧ್ಯತೆಯ ಶಕ್ತಿಯನ್ನು ಹೊಂದಿದೆ. ಭಾರತವು ಅತ್ಯಂತ ದೊಡ್ಡ ಆರ್ಥಿಕತೆಯ ಹಾದಿಯಲ್ಲಿದ್ದು, ವಾರ್ಷಿಕವಾಗಿ ಶೇ. 7ರಷ್ಟು ಬೆಳವಣಿಗೆ ಕಾಣುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.