Headlines

World Soil Day 2025: ಮಣ್ಣಿನ ಸಂರಕ್ಷಣೆ ಎಲ್ಲರ ಹೊಣೆ

World Soil Day 2025: ಮಣ್ಣಿನ  ಸಂರಕ್ಷಣೆ ಎಲ್ಲರ ಹೊಣೆ


ನೀರು, ಶುದ್ಧ ಗಾಳಿಯಂತೆ ಭೂಮಿ ಮೇಲಿನ ಜೀವ ಸಂಕುಲದ ಉಳಿವಿಗೆ ಮಣ್ಣು (ಮಣ್ಣು) ಅತೀ ಅಗತ್ಯ. ಹೌದು ಮಣ್ಣಿಲ್ಲದೆ ಬದುಕಿಲ್ಲ ಭವಿಷ್ಯವೂ ಇಲ್ಲ. ಆದರೆ ಇಂದು ರಾಸಾಯನಿಕ ಕೀಟನಾಶಕಗಳ ಅತಿಯಾದ ಬಳಕೆ, ಮಾಲಿನ್ಯ, ಕಾಡುಗಳ ನಾಶದಿಂದಾಗಿ ಮಣ್ಣಿನ ಫಲವತ್ತತೆಯು ದಿನದಿಂದ ದಿನಕ್ಕೆ ಕುಸಿದು ಹೋಗುತ್ತಿದೆ. ಆಹಾರ ಭದ್ರತೆ ಮತ್ತು ನಮ್ಮ ಸುಸ್ಥಿರ ಭವಿಷ್ಯವನ್ನು ಕಾಪಾಡಿಕೊಳ್ಳಲು ಮಣ್ಣು ಮತ್ತು ಮಣ್ಣಿನ ಆರೋಗ್ಯ ಸಂರಕ್ಷಣೆ ಮಾಡುವುದು ಅತ್ಯಗತ್ಯ. ಈ ಮಣ್ಣಿನ ಸಂರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ 05 ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸುವುದಿಲ್ಲ.

ವಿಶ್ವ ಮಣ್ಣಿನ ದಿನದ ಇತಿಹಾಸವೇನು?

2002 ನೇ ಇಸವಿಯಲ್ಲಿ ಇಂಟರ್ನ್ಯಾಷನಲ್ ಯೂನಿಯನ್ ಆಫ್ ಸಾಯಿಲ್ ಸೈನ್ಸ್ (IUSS) ಒಕ್ಕೂಟವು ಮಣ್ಣಿನ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಮತ್ತು ಮಣ್ಣಿನ ಸವೆತವನ್ನು ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸಲು ಡಿಸೆಂಬರ್ 05 ರಂದು ವಿಶ್ವ ಮಣ್ಣಿನ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮಾಡಿತು. ಇದರ ನಂತರ 2013 ರಲ್ಲಿ, ಆಹಾರ ಮತ್ತು ಕೃಷಿ ಸಂಸ್ಥೆ (FAO) ವಿಶ್ವ ಸಂಸ್ಥೆಯ ಸಾಮಾನ್ಯ ಸಭೆ 68 ನೇ ಸಮ್ಮೇಳನದಲ್ಲಿ ವಿಶ್ವ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸಬೇಕೆನ್ನುವ ಪ್ರಸ್ತಾಪವನ್ನು ಸಲ್ಲಿಸಲಾಯಿತು. ಮತ್ತು ಈ ಸಭೆಯಲ್ಲಿ ಸರ್ವಾನುಮತದಿಂದ ಈ ವಿಶೇಷ ದಿನವನ್ನು ಆಚರಿಸಲು ಒಪ್ಪಿಗೆ ಸೂಚಿಸಲಾಗಿದೆ. ಇದರ ಫಲವಾಗಿ 2014, ಡಿಸೆಂಬರ್ 05 ರಂದು ಮೊದಲ ಬಾರಿಗೆ ಮಣ್ಣಿನ ದಿನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಚರಿಸಲಾಯಿತು.

ಇದನ್ನೂ ಓದಿ: ಡಿಸೆಂಬರ್ 4 ರಾಂದೇ ಏಕೆ ಭಾರತೀಯ ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ ಗೊತ್ತಾ?

ವಿಶ್ವ ಮಣ್ಣಿನ ದಿನದ ಮಹತ್ವವೇನು?

  • ಈ ದಿನವನ್ನು ಆಚರಿಸುವ ಉದ್ದೇಶವು ಮಣ್ಣಿನ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುತ್ತದೆ.
  • ಇಂದು ರಸಾಯನಿಕ ಗೊಬ್ಬರಗಳ ಅತಿಯಾದ ಬಳಕೆ, ಪ್ಲಾಸ್ಟಿಕ್ ಬಳಕೆ ಸೇರಿದಂತೆ ಇತ್ಯಾದಿ ಮಾಲಿನ್ಯದ ಕಾರಣ ಮಣ್ಣಿನ ಫಲವತ್ತತೆಯು ಕ್ಷೀಣಿಸುತ್ತಿದೆ. ಪ್ರವಾಹ, ಭಾರೀ ಮಳೆಯ ಸಂದರ್ಭದಲ್ಲಿ ಮಣ್ಣಿನ ಸವೆತವೂ ಉಂಟಾಗುತ್ತಿದೆ. ಹೀಗಾಗಿ ಸುಸ್ಥಿರ ಭವಿಷ್ಯಕ್ಕಾಗಿ ಮಣ್ಣಿನ ಸಂರಕ್ಷಣೆ ಎಷ್ಟು ಮುಖ್ಯ ಎಂಬ ಬಗ್ಗೆ ಜಾಗೃತಿ ಮೂಡಿಸುವುದು ಈ ವಿಶೇಷ ಆಚರಣೆಯ ಮುಖ್ಯ ಉದ್ದೇಶವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *