Headlines

RCB ಹಾಗೂ ಡೆಲ್ಲಿಗೆ ಅತಿದೊಡ್ಡ ಶಾಕ್‌; ಟೂರ್ನಿ ಆರಂಭಕ್ಕೆ 10 ದಿನಗಳಿರುವಾಗಲೇ ಔಟ್!

RCB ಹಾಗೂ ಡೆಲ್ಲಿಗೆ ಅತಿದೊಡ್ಡ ಶಾಕ್‌; ಟೂರ್ನಿ ಆರಂಭಕ್ಕೆ 10 ದಿನಗಳಿರುವಾಗಲೇ ಔಟ್!

RCB ಹಾಗೂ ಡೆಲ್ಲಿಗೆ ಅತಿದೊಡ್ಡ ಶಾಕ್‌; ಟೂರ್ನಿ ಆರಂಭಕ್ಕೆ 10 ದಿನಗಳಿರುವಾಗಲೇ ಔಟ್!

ಬೆಂಗಳೂರು:ಬಹುನಿರೀಕ್ಷಿತ ನಾಲ್ಕನೇ ಸೀಸನ್ ವುಮೆನ್ಸ್‌ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಹೀಗಿರುವಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ಆಟಗಾರ್ತಿಯರಿಬ್ಬರು ಟೂರ್ನಿಯಿಂದ ಹೊರಬಿದ್ದಿದ್ದಾರೆ.

2026ನೇ ಸಾಲಿನ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ಇನ್ನು ಕೇವಲ 10 ದಿನಗಳು ಬಾಕಿ ಉಳಿದಿವೆ. ಮುಂಬರುವ ಜನವರಿ 09ರಿಂದ ಈ ಟೂರ್ನಿಗೆ ಚಾಲನೆ ಸಿಗಲಿದೆ. ಹೀಗಿರುವಾಗಲೇ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ.

ನಾಲ್ಕನೇ ಆವೃತ್ತಿಯ ವುಮೆನ್ಸ್ ಪ್ರೀಮಿಯರ್ ಲೀಗ್‌ ಟೂರ್ನಿಯಿಂದ ಆರ್‌ಸಿಬಿಯ ಸ್ಟಾರ್ ಆಟಗಾರ್ತಿ ಎಲೈಸಿ ಪೆರ್ರಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಅನಾಬೆಲ್ಲಾ ಸದರ್‌ಲೆಂಡ್‌ ಈ ಇಬ್ಬರು ಟೂರ್ನಿಯಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ.

ಆಸ್ಟ್ರೇಲಿಯಾ ಮೂಲದ ಸ್ಟಾರ್ ಆಲ್ರೌಂಡರ್‌ಗಳಾದ ಎಲೈಸಿ ಪೆರ್ರಿ ಹಾಗೂ ಅನಾಬೆಲ್ಲಾ ಸದರ್‌ಲೆಂಡ್ ಅವರ ಅನುಪಸ್ಥಿತಿ ಮುಂಬರುವ WPL ಟೂರ್ನಿಯಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.

ಅಂದಹಾಗೆ ಈ ಇಬ್ಬರು ಆಟಗಾರ್ತಿಯರು ವೈಯುಕ್ತಿಕ ಕಾರಣಗಳಿಂದಾಗಿ ಮುಂಬರುವ ವುಮೆನ್ಸ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದ್ದಾರೆ.

ಸದರ್‌ಲೆಂಡ್ ಕಳೆದ ಆವೃತ್ತಿಯ ವುಮೆನ್ಸ್‌ ಪ್ರೀಮಿಯರ್‌ ಲೀಗ್‌ನಲ್ಲಿ 9 ವಿಕೆಟ್ ಹಾಗೂ 95 ರನ್ ಸಿಡಿಸಿದ್ದರು. ಹೀಗಾಗಿ ಡೆಲ್ಲಿ ಫ್ರಾಂಚೈಸಿ ಸದರ್‌ಲೆಂಡ್ ಅವರನ್ನು ರೀಟೈನ್ ಮಾಡಿಕೊಂಡಿತ್ತು.

ಎರಡನೇ ಆವೃತ್ತಿಯ WPL ಟೂರ್ನಿಯಲ್ಲಿ ಪೆರ್ರಿ ಗರಿಷ್ಠ ರನ್ ಬಾರಿಸಿದ ಆಟಗಾರ್ತಿ ಎನಿಸಿಕೊಂಡಿದ್ದರು.

WPL ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಫ್ರಾಂಚೈಸಿಯು ಎಲೈಸಿ ಪೆರ್ರಿ ಸೇರಿದಂತೆ ಸ್ಮೃತಿ ಮಂಧನಾ, ರಿಚಾ ಘೋಷ್ ಹಾಗೂ ಶ್ರೇಯಾಂಕ ಪಾಟೀಲ್ ಅವರನ್ನು ರೀಟೈನ್ ಮಾಡಿಕೊಂಡಿತ್ತು.

ಇದೀಗ ಆರ್‌ಸಿಬಿ ಫ್ರಾಂಚೈಸಿಯು ಪೆರ್ರಿ ಬದಲಿಗೆ ಸಯಾಲಿ ಸತ್ಗೆರೆ ಹಾಗೂ ಡೆಲ್ಲಿ ಫ್ರಾಂಚೈಸಿಯು ಸದರ್‌ಲೆಂಡ್ ಬದಲಿಗೆ ಆಸೀಸ್ ಮೂಲದ ಲೆಗ್ ಸ್ಪಿನ್ನರ್ ಅಲಾನಾ ಕಿಂಗ್ ಅವರನ್ನು ತನ್ನ ತೆಕ್ಕೆಗೆ ಸೆಳೆದುಕೊಂಡಿವೆ.

Source link

Leave a Reply

Your email address will not be published. Required fields are marked *