RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ

RCB vs DC: ಫೈನಲ್​ನಲ್ಲಿ ಗೆಲ್ಲೋದು ಇವರಂತೆ… ಹೀಗೊಂದು ಲೆಕ್ಕಾಚಾರ


WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ಕ್ಕೆ ಇಂದು (ಫೆ.5) ತೆರೆ ಬೀಳಲಿದೆ. ವಡೋದರಾದ ಬಿಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಖಾಮುಖಿಯಾಗಲಿದೆ. ಈ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದೇ ಕುತೂಹಲ. ಈ ಕುತೂಹಲಕ್ಕೆ ಕಿಚ್ಚು ಹಚ್ಚುವ ಹಾಗೆ ಯೋಚಿಸುವುದು ಎಲ್ಲರ ಗಮನ ಸೆಳೆಯುತ್ತಿದೆ. ಅದೇನೆಂದರೆ ಎಲಿಮಿನೇಟರ್ ಪಂದ್ಯ ಗೆದ್ದವರೇ ಚಾಂಪಿಯನ್.

ವುಮೆನ್ಸ್ ಪ್ರೀಮಿಯರ್ ಲೀಗ್‌ನ ಕಳೆದ ಮೂರು ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ 2 ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಫೈನಲ್ ಪಂದ್ಯ ಗೆದ್ದಿರುವ ತಂಡ.

ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅಂಕಪಟ್ಟಿ ಅಗ್ರಸ್ಥಾನ ಅಲಂಕರಿಸಿದ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಬದಲಾಗಿ ಎಲಿಮಿನೇಟರ್ ಪಂದ್ಯ ಗೆದ್ದು ಬಂದಂತಹ ತಂಡಗಳವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ.

  • 2023 ರಲ್ಲಿ ನಡೆದ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ವೇಳೆ ದ್ವಿತೀಯ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ತಂಡವು ಎಲಿಮಿನೇಟರ್ ಗೆದ್ದು ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.
  • 2024 ರ ವುಮೆನ್ಸ್ ಪ್ರೀಮಿಯರ್ ಲೀಗ್‌ನ ಅಂಕ ಪಟ್ಟಿಯ ಟಾಪ್-3 ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕಾಣಿಸಿಕೊಂಡಿತ್ತು. ಅದರಂತೆ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್‌ಗೇರಿದರೆ ಎಲಿಮಿನೇಟರ್ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿ ಆರ್ಸಿಬಿ ಫೈನಲ್‌ಗೆ ಪ್ರವೇಶಿಸಿದೆ. ಅಷ್ಟೇ ಅಲ್ಲದೆ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಸೋಲುಣಿಸಿ ಆರ್ಸಿಬಿ ಪ್ರಶಸ್ತಿ ಗೆದ್ದುಕೊಂಡಿದ್ದರು.
  • 2025 ರ ಸೀಸನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ, ಮುಂಬೈ ಇಂಡಿಯನ್ಸ್ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಎಲಿಮಿನೇಟರ್ ರಾಜಧಾನಿ ಜೈಗೇರಿಂಟ್ಸ್ ತಂಡಕ್ಕೆ ಸೋಲು ಮುಂಬೈ ಇಂಡಿಯನ್ಸ್ ಫೈನಲ್‌ಗೆ ತಲುಪಿತು. ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದರು.

ಇದನ್ನೂ ಓದಿ: ಟಿ20 ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್

ಅಂದರೆ ಕಳೆದ ಮೂರು ಸೀಸನ್‌ನಲ್ಲಿ ಎಲಿಮಿನೇಟರ್ ಪಂದ್ಯವಾಡಿದ ತಂಡವೇ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಎಲಿಮಿನೇಟರ್ ಕಂಡಿರುವುದು ಡೆಲ್ಲಿ ಕ್ಯಾಪಿಟಲ್ಸ್. ಹೀಗಾಗಿಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಲಿದೆ ಎಂಬ ಲೆಕ್ಕಾಚಾರ ಶುರುವಾಗಿದೆ. ಇದಾಗ್ಯೂ ಆರ್ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ಈ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಲಿದ್ದಾರಾ ಕಾದು ನೋಡಬೇಕಾಗಿದೆ.



Source link

Leave a Reply

Your email address will not be published. Required fields are marked *