
ಜಾರ್ಖಂಡ್, ಏಪ್ರಿಲ್ 09: ಕಲ್ಲಿದ್ದಲು ಟ್ರಕ್ ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ. ಜಾರ್ಖಂಡ್‌ನ ದನ್‌ಬಾನ್‌ನಲ್ಲಿ ಕಲ್ಲಿದ್ದಲು ತುಂಬಿದ್ದ ಟ್ರಕ್ ಒಂದು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ವಿರುದ್ಧ ದಿಕ್ಕಿಗೆ ಬಂದು ಸ್ಕಾರ್ಪಿಯೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಕಾಣಿಸಿಕೊಂಡಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದ ಬಳಿಕ ಟ್ರಕ್ ಕೂಡ ಮಗುಚಿ ಬಿದ್ದಿದ್ದು, ಕಲ್ಲಿದ್ದಲು ರಸ್ತೆ ತುಂಬಾ ಹರಡಿತ್ತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ