Headlines

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ

ಯಾದಗಿರಿ: ಒಂದೇ ಕುಟುಂಬ 6 ಜನ ಸಜೀವದಹನ; ಶಾಕಿಂಗ್​ ಮಾಹಿತಿ ಬಿಚ್ಚಿಟ್ಟ ಎಸ್​​ಪಿ


ಯಾದಗಿರಿ, ಏಪ್ರಿಲ್ 17: ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಒಂದೇ ಕುಟುಂಬದ 6 ಜನ ಸಜೀವದಹನವಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಬಳಿ ನಡೆದಿದೆ. ಘಟನೆಯ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್ಪಿ ಪೃಥ್ವಿಕ್ ಶಂಕರ್, ಕಾರಿನಲ್ಲಿ ಒಂದೇ ಕುಟುಂಬದ ಎಂಟು ಜನ ಪ್ರಯಾಣಿಸುತ್ತಿದ್ದರು. ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳಿಗೆ ಗಾಯಗಳಾಗಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವನ್ನಪ್ಪಿದ ಎಲ್ಲರೂ ರಾಯಚೂರು ಜಿಲ್ಲೆಯ ಶಿರವಾರ್ ಪಟ್ಟಣ ನಿವಾಸಿಗಳು. ಸುರಪುರ ಪಟ್ಟಣದ ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ವಾಪಸ್ ಹೋಗುವಾಗ ಕಾರು ಬಸ್ ಟೆಕ್ ಮಾಡಲು ಹೋದಾಗ ಸಂಭವಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *