Surapur bike cruiser collision: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಕ್ರೂಸರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡಿದ್ದಾರೆ.

ಯಾದಗಿರಿ: ಕ್ರೂಸರ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆಲ್ದಾಳ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಗುದ್ದಿರುವ ರಭಸಕ್ಕೆ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇತ್ತ ಬೈಕ್‌ಗೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ ರಸ್ತೆ ಬದಿ ಪಲ್ಟಿಯಾಗಿದ್ದು ಕ್ರೂಸರ್ ವಾಹನದಲ್ಲಿದ್ದವರಿಗೂ ಹಲವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ರಾಮನಗರ: ಅತ್ತೆ ಸೊಸೆ ಜಗಳ: 19 ವರ್ಷದ ಗರ್ಭಿಣಿ ಸೊಸೆ ಸಾವಿಗೆ ಶರಣು

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತಪಟ್ಟವರನ್ನು ಗೋಗಿ ಮೂಲದವರು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮಡಿಕೇರಿಯ ಭಾಗಮಂಡಲದಲ್ಲಿ ಲೀವಿಂಗ್ ಟುಗೆದರ್ ಜೋಡಿಯ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಅಪಘಾತ ಸ್ಥಳಕ್ಕೆ ಕೆಂಭಾವಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೀದರ್: ಶಾಲಾ ಕಟ್ಟಡದಿಂದ ಜಿಗಿದು 10ನೇ ಕ್ಲಾಸ್ ಬಾಲಕಿ ಸಾವಿಗೆ ಶರಣು

Source link
ಯಾದಗಿರಿ: ಸುರಪುರ ಬಳಿ ಬೈಕ್‌ಗೆ ಕ್ರೂಸರ್ ಡಿಕ್ಕಿ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು