
ಯಾದಗಿರಿ, ಮಾರ್ಚ್ 15: ಬಹಿಷ್ಕಾರಕ್ಕೆ ಮನನೊಂದು ಮಾಂಗಲ್ಯ ಸರ ತೆಗೆದಿಟ್ಟು ನದಿಗೆ ಹಾರಿ ಮಹಿಳೆ ಆತ್ಮಹತ್ಯೆ (ಆತ್ಮಹತ್ಯೆ) ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಡಗೇರ ತಾಲೂಕಿನ ಜೋಳದಡಗಿ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿಂದ ಹಾರಿ ನಿನ್ನೆ ರಾತ್ರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯಾದಗಿರಿಯ ಹೊರ ಭಾಗದ ಗಿರಿನಗರದ ನಿವಾಸಿ ಕಮಲಮ್ಮ (42) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸದ್ಯ ವಡಗೇರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದದ್ದೇನು?
ಕಮಲಮ್ಮ ಸಿಳ್ಳೆ ಪ್ರಸಿದ್ಧ ಸಮುದಾಯದವರು. ಅವರ ಪುತ್ರ ಎರ್ರಿಸ್ವಾಮಿ ವಿರುದ್ಧ ನೈತಿಕ ಸಂಬಂಧ ಎಂದು ಆರೋಪಿಸಿ ಆರೋಪಿ ಸಮಾಜದ ಮುಖಂಡರಿಂದ ಇಡೀ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಮೀನುಗಾರಿಕೆ ಜೊತೆಗೆ ಮಾರಾಟ ಮಾಡಲು ಅವಕಾಶ ನೀಡಿಲ್ಲ.
ಇದನ್ನೂ ಓದಿ: ಮದುವೆಯಾಗಿ ಒಂದು ವರ್ಷಕ್ಕೆ ವಿವಾಹಿತೆ ಸಾವು: ಅಳಿಯನೇ ಕೊಲೆಗೈದದ್ದು ಎಂದ ಮಹಿಳೆ
ಇದೆ ಕಾರಣಕ್ಕೆ ಕಮಲಮ್ಮ ನೊಂದುಕೊಂಡು, ಮಗಳವಾದ ಜೋಳದಡಗಿ ಗ್ರಾಮಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮುನ್ನ ಬ್ಯಾರೇಜ್ ಮೇಲೆ ಮಾಂಗಲ್ಯ ಸರ ತೆಗೆದಿದ್ದಾರೆ. ಇಂದು ಮಧ್ಯಾಹ್ನ ಅಗ್ನಿ ಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ.
ಮದುವೆಗೆ ವಿರೋಧ: ಭದ್ರನಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಗಳು
ತುಂಗ ಭದ್ರನಡಿಗೆ ಹಾರಿ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಬಳಿ ಇರುವ ತುಂಗಭದ್ರ ಸೇತುವೆ ಬಳಿ ಇತ್ತೀಚೆಗೆ ನಡೆದಿದೆ. ಸ್ಥಳೀಯರಿಂದ ಮಾಹಿತಿ ಬೆನ್ನಲ್ಲೇ ಅಗ್ನಿ ಶಾಮಕ ದಳ ಸಿಬ್ಬಂದಿ ಪ್ರೇಮಿಗಳ ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ: ಮದುವೆ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಸಹೋದರರಿಂದಲೇ ಹಲ್ಲೆಗೊಳಗಾದ ವ್ಯಕ್ತಿ ಸಾವು
ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶದ ನಿವಾಸಿಗಳು. ಅಪ್ರಾಪ್ತ ಬಾಲಕಿ ಹಾಗೂ 19 ವರ್ಷದ ಯುವಕ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು. ಪ್ರೇಮಿಗಳು ಸೇತುವೆಯಿಂದ ನದಿಗೆ ಹಾರಿದ್ದಾರೆ. ನದಿಯಲ್ಲಿ ನೀರು ಕಡಿಮೆ ಇದ್ದ ಹಿನ್ನೆಲೆ ನಡುಗಡ್ಡೆಯಲ್ಲಿ ಆಸರೆ ಪಡೆದಿದ್ದರು. ಯುವಕ ಅನ್ಯಧರ್ಮೀಯ ಹಿನ್ನೆಲೆ ಮನೆಯಲ್ಲಿ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಮನೆ ಬಿಟ್ಟು ಮೈಸೂರು, ಶಿವಮೊಗ್ಗ ಸುತ್ತಾಡಿ ಹೊನ್ನಾಳಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದರು. ಹೊನ್ನಾಳಿ ಪೊಲೀಸ್ ಠಾಣೆ ಘಟನೆ ನಡೆದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.