Headlines

ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ

ಪಾರ್ಟಿಯಲ್ಲಿ ಶಂಕರ್​​ ನಾಗ್ ಹಾಡು ಹಾಡಿದ ಯಶ್; ಇಲ್ಲಿದೆ ವಿಡಿಯೋ


ನಟ ರಾಕಿಂಗ್ ಸ್ಟಾರ್ ಯಶ್ ಅವರು ಶಂಕರ್ ನಾಗ್ ಅವರ ದೊಡ್ಡ ಅಭಿಮಾನಿ. ಇದು ಹಲವು ಬಾರಿ ಆಗಿದೆ. ಯಶ್ ಅವರು ‘ಗೂಗ್ಲಿ’ ಸಿನಿಮಾದಲ್ಲಿ ಶಂಕರ್ ನಾಗ್ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದರು. ಈಗ ಯಶ್ ಅವರು ಪಾರ್ಟಿಯಲ್ಲಿ ಶಂಕರ್ ನಾಗ್ ಸಿನಿಮಾದ ಹಾಡು ಹಾಡಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಯಶ್ ಅವರ ಕನ್ನಡ ಪ್ರೀತಿಗೆ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಅಂದಹಾಗೆ ಇದು ಅವರ ಬರ್ತ್ ಪಾರ್ಟಿ ಸಂದರ್ಭದ ವಿಡಿಯೋ ಹೌದೋ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಯಶ್ ಅವರು ತುಂಬಾ ಎತ್ತರಕ್ಕೆ ಬೆಳೆದರೂ ಕನ್ನಡದ ಬಗ್ಗೆ ಅವರು ತೋರುವ ಪ್ರೀತಿ ಕಡಿಮೆ ಮಾಡಿಲ್ಲ. ಪರಭಾಷೆಯಲ್ಲಿ ಹೆಚ್ಚು ನಟಿಸೋ ಬದಲು, ಪರಭಾಷೆಯವರನ್ನು ಇಲ್ಲಿಗೆ ಕರೆಸಬೇಕು ಎಂಬ ಆಲೋಚನೆ ಅವರಿಗೆ ಯಾವಾಗಲೂ ಇತ್ತು. ‘ಟಾಕ್ಸಿಕ್’ ಚಿತ್ರ ಅದಕ್ಕೆ ಉತ್ತಮ ಉದಾಹರಣೆ. ಪರಭಾಷಾ ತಂತ್ರಜ್ಞರು ಹಾಗೂ ಕಲಾವಿದರನ್ನು ಈ ಚಿತ್ರಕ್ಕಾಗಿ ಕರೆಸಿಕೊಂಡಿದ್ದಾರೆ. ಹಾಲಿವುಡ್ ತಂತ್ರಜ್ಞರು ಈ ಚಿತ್ರಕ್ಕಾಗಿ ಕೆಲಸ ಮಾಡಿದ್ದಾರೆ. ಆದರೆ, ಅವರ ಕನ್ನಡ ಪ್ರೀತಿ ಕಡಿಮೆ ಆಗಿಲ್ಲ.

ಇದನ್ನೂ ಓದಿ: ದಾಖಲೆಯ ವೀಕ್ಷಣೆ ಕಂಡ ‘ಟಾಕ್ಸಿಕ್’ ಟೀಸರ್; ಇದು ಯಶ್ ಹವಾ

ಜನವರಿ 8 ಯಶ್ ಬರ್ತ್ತೇ. ಈ ಸಂದರ್ಭದ ವಿಡಿಯೋ ಎಂಬ ವಿಡಿಯೋ ಒಂದು ವೈರಲ್ ಆಗುತ್ತಿದೆ.ಈ ವಿಡಿಯೋದಲ್ಲಿ ಯಶ್ ಅವರು ಶಂಕರ್ ನಾಗ್ ಅವರ ‘ಸಿಬಿಐ ಶಂಕರ್’ ಸಿನಿಮಾದ ‘ಗೀತಾಂಜಲಿ’ ಹಾಡನ್ನು ಹಾಡುತ್ತಿದ್ದಾರೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿದೆ. ಇದು ಹಳೆಯ ವಿಡಿಯೋ ಎನ್ನಲಾಗುತ್ತಿದೆ.

ಯಶ್ ಅವರು ಸದ್ಯ ಮುಂಬೈನಲ್ಲಿದ್ದಾರೆ. ಜೊತೆಗೆ, ಯಶ್ ಅವರು ಇತ್ತೀಚೆಗೆ ಗೆಟಪ್ ಅನ್ನು ಹೊಂದಿದ್ದಾರೆ. ಈ ಕಾರಣದಿಂದಲೇ ಅವರ ಮುಖ ಹಾಗೂ ತಲೆಯನ್ನು ಮುಚ್ಚಿಕೊಂಡು ಹೋಗಿದ್ದರು. ಈ ವಿಡಿಯೋದಲ್ಲಿ ಅವರು ಹಳೆಯ ಗೆಟಪ್ ನಲ್ಲೇ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *