Headlines

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಸಿಡಿದೆದ್ದ ಮೃತಳ ಸಹಪಾಠಿಗಳು


ಬೆಂಗಳೂರು, (ಜನವರಿ 09): ಉಪನ್ಯಾಸಕನ ಅವಮಾನಕ್ಕೆ ಮನನೊಂದು ಡೆಂಟಲ್ ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು (ಬೆಂಗಳೂರು) ಹೊರವಲಯದ ಆನೇಕಲ್ (ಆನೇಕಲ್) ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಮೃತಳನ್ನು ಯಶಸ್ವಿನಿ(23) ಎಂದು ಗುರುತಿಸಲಾಗಿದೆ, ಬೊಮ್ಮನಹಳ್ಳಿ ಖಾಸಗಿ ಕಾಲೇಜಿನ ಓರಲ್ ಮೆಡಿಸಿನ್ ಮತ್ತು ರೇಡಿಯಾಲಜಿ ವಿಭಾಗದಲ್ಲಿ 3ನೇ ವರ್ಷದ ವ್ಯಾಸಂಗ ನಡೆಸುತ್ತಿದೆ. ಕಣ್ಣು ನೋವಿನಿಂದ ಕಾಲೇಜಿಗೆ ರಜೆ ಹಾಕಿದ್ದಕ್ಕೆ ಉಪನ್ಯಾಸಕ ಕ್ಲಾಸ್‌ನಲ್ಲಿ ಅವಮಾನ ಮಾಡಿ, ಕಿರುಕುಳ ನೀಡಿದ್ದನ್ನು ತಾಳಲಾರದೆ ಯಶಸ್ವಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪ ಕೇಳಿಬಂದಿದ್ದು, ಈ ಸಂಬಂಧ ವಿದ್ಯಾರ್ಥಿಗಳು ಉಪನ್ಯಾಸಕರ ವಿರುದ್ಧ ಸಿಡಿದೆದ್ದಿದ್ದಾರೆ. ಕಾಲೇಜಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಸ್ಟೀಸ್‌ಗೆ ಯಶಸ್ವಿನಿ ಎಂದು ಘೋಷಣೆ ಕೂಗಿದ್ದಾರೆ. ಆತ್ಮಹತ್ಯೆಗೆ ಕಾರಣರಾದ ಉಪನ್ಯಾಸಕನ ವಿರುದ್ಧ ಸೂಕ್ತ ಕ್ರಮವಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *