ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ

ಹೊಸ ವರ್ಷಕ್ಕೆ ಬೆಂಗಳೂರು ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ


ಬೆಂಗಳೂರು, ಡಿಸೆಂಬರ್ 03: ಕಳೆದ ನವೆಂಬರ್ 18 ರಂದು ಕೊಲ್ಕತ್ತಾದ ಟಿಟಾಗರ್ ನಿಂದ ಹೊರಟಿದ್ದ ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್ ಇಂದು ಸಂಜೆ ಬೆಂಗಳೂರಿನ ಹೆಬ್ಬಗೋಡಿ ಡಿಪೋ ತಲುಪಿದೆ. ಈ ಹೊಸ ರೈಲು ಸೇರ್ಪಡೆಯಿಂದ ರೈಲುಗಳ ನಡುವೆ ಸಾಗುವ ಸಮಯ ಮತ್ತಷ್ಟು ಇಳಿಕೆಯಾಗಲಿದೆ. ಆ ಮೂಲಕ ಎಲ್ಲೋ ಮಾರ್ಗದ ಮೆಟ್ರೋ (ಮೆಟ್ರೋ ಹಳದಿ ಮಾರ್ಗ) ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ (BMRCL)ಹೊಸ ವರ್ಷಕ್ಕೆ ಗುಡ್ ನ್ಯೂಸ್ ನೀಡಿದೆ.

ಸದ್ಯ ಆರನೇ ಡ್ರೈವರ್ ಲೆಸ್ ಮೆಟ್ರೋ ರೈಲು ಸೆಟ್ ಬೆಂಗಳೂರು ತಲುಪಿದೆ. ಈ ಹೊಸ ರೈಲು ಡಿಸೆಂಬರ್ ಅಂತ್ಯಕ್ಕೆ ವಾಣಿಜ್ಯ ಸೇವೆ ಆರಂಭವಾಗಲಿದೆ. ಸದ್ಯ ಎಲ್ಲೋ ಮಾರ್ಗದಲ್ಲಿ 15 ರಿಂದ 18 ನಿಮಿಷಕ್ಕೆ ರೈಲು ಸಂಚಾರ ಮಾಡಲಾಗುತ್ತಿದೆ. ರೈಲುಗಳ ಸಂಖ್ಯೆ ಕಡಿಮೆ ಪ್ರಯಾಣಿಕರು ಆಗಾಗ ಟೀಕಿಸುತ್ತಾರೆ. ಹೊಸ ರೈಲು ಓಡಾಟ ಆರಂಭವಾದರೆ ರೈಲುಗಳು ಓಡಾಟದ ಸಮಯ 10 ರಿಂದ 12 ನಿಮಿಷಕ್ಕೆ ಇಳಿಕೆಯಾಗುವ ಸಾಧ್ಯತೆ ಇದೆ. ಆ ಮೂಲಕ ಪ್ರಯಾಣ ಸುಗುಮ ವಸ್ತು.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರು – ತುಮಕೂರು ಮೆಟ್ರೋ ಯೋಜನೆ ಡಿಪಿಆರ್‌ಗೆ ಬಿಡ್ ಕರೆದ ಬಿಎಂಆರ್ ಸಿಎಲ್

ಇನ್ನು ಮತ್ತು ಜನವರಿಯಲ್ಲಿ ಡಿಸೆಂಬರ್ ಇನ್ನೆರಡು ಹೊಸ ರೈಲುಗಳು ಟಿಟಾಗರ್ ನಿಂದ ಬೆಂಗಳೂರಿಗೆ ಆಗಮಿಸಲಿವೆ, 2026 ರ ಆರಂಭದಲ್ಲಿ ಹಸಿರು ಮತ್ತು ನೇರಳೆ ಮೆಟ್ರೋ ಮಾರ್ಗಗಳಲ್ಲಿ ಹಳದಿ ಮಾರ್ಗದಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚಾರ ನಡೆಯಲಿದೆ.

ಆರ್‌.ವಿ ರೋಡ್‌ನಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ಯೆಲ್ಲೋ ಲೈನ್‌ನಲ್ಲಿ ಸದ್ಯ ಐದು ಮೆಟ್ರೋ ರೈಲುಗಳು ಮಾತ್ರ ಸಂಚಾರ ಮಾಡುತ್ತಿವೆ. 19.15 ಕಿಮೀ ವಿಸ್ತೀರ್ಣವಿರುವ ಯೆಲ್ಲೋ ಲೈನ್ ಮೆಟ್ರೋ ಮಾರ್ಗಕ್ಕೆ ಆಗಸ್ಟ್ 10 ರಂದು ಚಾಲನೆ ನೀಡಲಾಯಿತು. ಆಗಸ್ಟ್ 11ರಿಂದ ವಾಣಿಜ್ಯ ಸಂಚಾರ ಆರಂಭಿಸಲಾಗಿದೆ.

ಇದನ್ನೂ ಓದಿ: ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ತಪ್ಪು ಲೆಕ್ಕ ನೀಡಿತಾ BRCL? ಗಣಿತ ಪಾಠದ ಅವಶ್ಯಕತೆ ಇದೆ ಎಂದ ತೇಜಸ್ವಿ ಸೂರ್ಯ

ಒಟ್ಟಿನಲ್ಲಿ ಯೆಲ್ಲೋ ಲೈನ್‌ನಲ್ಲಿ ಸಂಚಾರ ಮಾಡಲು ಆರನೇ ರೈಲು ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದು ತಲುಪಿದೆ. ಇದು ನಮ್ಮ ಮೆಟ್ರೋ ಪ್ರಯಾಣಿಕರಿಗೆ ದೊಡ್ಡ ಮಟ್ಟದಲ್ಲಿ ಸಹಾಯ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *