ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್

ಯೋಗೀಶ್ ಗೌಡ ಕೊಲೆ ಕೇಸ್ ತೀರ್ಪು: ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್


ಧಾರವಾಡ, (ಏಪ್ರಿಲ್.15): ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇನ್ನೇನು ಕಲವೇ ಹೊತ್ತಿನಲ್ಲಿ ಅಂತಿಮ ತೀರ್ಪು ಪ್ರಕಟಿಸಲಿದೆ. ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 21 ಮಂದಿ ಆರೋಪಿಗಳ ಭವಿಷ್ಯ ನಿರ್ಧಾರ. ಹೀಗಾಗಿ ತೀರ್ಪು ಪ್ರಕಟವಾಗುವ ಮುನ್ನವೇ ಮುಂಜಾಗ್ರತಾ ಕ್ರಮವಾಗಿ ಧಾರವಾಡದಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ.

ತೀರ್ಪು ಪ್ರಕಟಗೊಂಡ ಬಳಿಕ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ನಿರೀಕ್ಷಿಸಲಾಗಿದೆ, ವಿನಯ್ ಕುಲಕರ್ಣಿ ನಿವಾಸದ ಬಳಿ 100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ. ಹಾಗೇ ಧಾರವಾಡ ನಗರ ಹಾಗೂ ಗ್ರಾಮೀಣ ಪ್ರದೇಶದ ಸೂಕ್ಷ್ಮ ಪ್ರದೇಶದಲ್ಲಿ ಹೊಲ ರೌಂಡ್ಸ್ ಹಾಕಲಾಗುತ್ತಿದೆ.



Source link

Leave a Reply

Your email address will not be published. Required fields are marked *