ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್ ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಯುವಕ ಎದೆಯ ಮೇಲೆ ಕೈ ಇಟ್ಟು ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಅವಳ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ. ಈ ವಿಡಿಯೋ ಪೊಲೀಸರಿಗೂ ಟ್ಯಾಗ್ ಮಾಡಿದ್ದಾಳೆ. ಈ ವಿಡಿಯೋ ಮೂಲಕ ನಮ್ಮ ರಕ್ಷಣೆಗೆ ನಾವೇ ಮುಂದಾಗಬೇಕು ಎಂದು ಸಂದೇಶ ನೀಡಿದ್ದಾಳೆ. ಇದೀಗ ಅಂಕೋಲಾ ದೂರು ದಾಖಲಿಸಿಕೊಂಡಿದ್ದು, ವಿಡಿಯೋ ಆಧಾರದ ಮೇಲೆ ದೂರು ದಾಖಲಿಸಿಕೊಂಡು ಯುವಕರ ಮೇಲೆ ಕ್ರಮ ಕೈಗೊಳ್ಳುವ ಭರವಸೆಯನ್ನು ಎಸ್ಪಿ ದೀಪನ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ