ಜಮೀರ್ ಅಹ್ಮದ್ ಅವರ ಪುತ್ರ ಜೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ (ಕಲ್ಟ್ ಕನ್ನಡ ಚಲನಚಿತ್ರ) ಜನವರಿ 23 ರಂದು ಬಿಡುಗಡೆ ಆಯಿತು. ಈ ಸಿನಿಮಾಗೆ ಅನಿಲ್ ಕುಮಾರ್ ಅವರು ನಿರ್ದೇಶನ ಮಾಡಿದ್ದಾರೆ. ಝೈದ್ ಖಾನ್ ಅವರ ಜೊತೆ ರಚಿತಾ ರಾಮ್ (ರಚಿತಾ ರಾಮ್)ಮಲೈಕಾ ವಸುಪಾಲ್, ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶನ್ ಬಿಳಗಲಿ ಮುಂತಾದವರು ನಟಿಸಿದ್ದಾರೆ. ಜನವರಿ 23ರಂದು ಹಲವು ಕಡೆಗಳಲ್ಲಿ ಈ ಸಿನಿಮಾ ಹೌಸ್‌ಫುಲ್ ಆಯಿತು. ಝೈದ್ ಖಾನ್ (ಜೈದ್ ಖಾನ್)ಮಲೈಕಾ ಅವರು ಕೆಲವು ಚಿತ್ರಮಂದಿರಗಳಿಗೆ ಭೇಟಿ ನೀಡಿದ್ದಾರೆ. ಜನವರಿ 23ಕ್ಕೆ ‘ಲ್ಯಾಂಡ್‌ಲಾಾರ್ಡ್’, ‘ಬಾರ್ಡರ್ 2’ ಮುಂತಾದ ಸಿನಿಮಾಗಳು ಬಿಡುಗಡೆ ಆಗಿದ್ದು, ಎಲ್ಲ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.